ಮನೆ ಮನರಂಜನೆ ಇಂದು ಹಾಸ್ಯ ಚಕ್ರವರ್ತಿ ನರಸಿಂಹರಾಜು ಅವರ  100ನೇ ಹುಟ್ಟುಹಬ್ಬ

ಇಂದು ಹಾಸ್ಯ ಚಕ್ರವರ್ತಿ ನರಸಿಂಹರಾಜು ಅವರ  100ನೇ ಹುಟ್ಟುಹಬ್ಬ

0

ಇಂದು ಕನ್ನಡ ಚಿತ್ರರಂಗ ಕಂಡ ಖ್ಯಾತ ಹಾಸ್ಯನಟ ಹಾಸ್ಯ ಚಕ್ರವರ್ತಿ ನರಸಿಂಹರಾಜು 100ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಬಾಲ್ಯದಲ್ಲೇ ರಂಗಭೂಮಿ ಪ್ರವೇಶಿಸಿದ ನರಸಿಂಹರಾಜು ಮುಂದೆ ಚಿತ್ರರಂಗಕ್ಕೂ ಬಂದು ಪ್ರೇಕ್ಷಕರನ್ನು ರಂಜಿಸಿದರು. ನರಸಿಂಹರಾಜು ಅವರು ಕನ್ನಡ ಚಿತ್ರರಂಗದ ಸುವರ್ಣ ಕಾಲ ಎನ್ನಬಹುದಾದ ಅರವತ್ತು, ಎಪ್ಪತ್ತರ ದಶಕದಲ್ಲಿ ಹಾಸ್ಯಚಕ್ರವರ್ತಿಯಾಗಿ ಕನ್ನಡಿಗರನ್ನು ರಂಜಿಸಿದ್ದರು.

Join Our Whatsapp Group

ಇಂತಹ ನಟನಾ ಚಕ್ರವರ್ತಿಗೆ ಒಮ್ಮೆಯೂ ರಾಜ್ಯ ಸರ್ಕಾರದ ಪ್ರಶಸ್ತಿ ಕೂಡಾ ಬರಲಿಲ್ಲ. ಅವರ ಹೆಸರಿನಲ್ಲಿ ಯಾವೊಂದು ಸ್ಮಾರಕ, ರಸ್ತೆ, ಕಟ್ಟಡಗಳು ಮೂಡಲಿಲ್ಲ. ಆದರೆ ಅವರು ಚಿತ್ರರಸಿಕರ ಹೃದಯದಲ್ಲಿ ಮೂಡಿರುವಷ್ಟು ಉಳಿದವರು ನಿಲ್ಲಬಲ್ಲರು ಎಂದು ಯಾರೂ ಊಹಿಸಲೂ ಸಾಧ್ಯವಿಲ್ಲ.

ಬಾಲ್ಯದಲ್ಲೇ ರಂಗಭೂಮಿ ಪ್ರವೇಶಿಸಿದ ನರಸಿಂಹರಾಜು ಮುಂದೆ ಚಿತ್ರರಂಗಕ್ಕೂ ಬಂದು ಪ್ರೇಕ್ಷಕರನ್ನು ರಂಜಿಸಿದರು. ಕನ್ನಡದ ಚಾರ್ಲಿ ಚಾಪ್ಲಿನ್ ಎನಿಸಿಕೊಂಡಿದ್ದ ಅವರು ಕನ್ನಡ ಚಿತ್ರರಂಗದ ಮೊದಲ ಸ್ಟಾರ್ ಕಮೆಡಿಯನ್. ಬರೀ ನಟನೆ ಮಾತ್ರವಲ್ಲೇ ಸಿನಿಮಾ ನಿರ್ಮಾಣಕ್ಕೂ ಕೈ ಹಾಕಿ ನರಸಿಂಹ ರಾಜು ಕನ್ನಡ ಚಿತ್ರರಂಗಕ್ಕೆ ಸೇವೆ ಸಲ್ಲಿಸಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ 100 ಸಿನಿಮಾಗಳನ್ನು ಪೂರೈಸಿದ ನಟ ನರಸಿಂಹ ರಾಜು. ಜುಲೈ 24, 1923ರಂದು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ರಾಮರಾಜು ಮತ್ತು ವೆಂಕಟಲಕ್ಷ್ಮಮ್ಮನವರ ಮಗನಾಗಿ ಅವರು ಜನಿಸಿದರು. ಬಾಲ್ಯದಿಂದಲೇ ಕಲೆಯನ್ನು ಬದುಕಾಗಿಸಿಕೊಂಡರು. ತಮ್ಮ ನ್ಯೂನ್ಯತೆಗಳನ್ನೇ ಪ್ಲಸ್ ಮಾಡಿಕೊಂಡು ಹಾಸ್ಯ ಪಾತ್ರಗಳಲ್ಲಿ ನಟಿಸಿದರು. ಭಾರತ ಲಲಿತ ಕಲಾ ಸಂಘ, ಬೇಲೂರಿನ ಗುಂಡಾ ಜೋಯಿಸರ ಕಂಪೆನಿ, ಗುಬ್ಬಿಯ ಚೆನ್ನಬಸವೇಶ್ವರ ನಾಟಕ ಕಂಪೆನಿ ಹೀಗೆ ಹಲವು ನಾಟಕ ಕಂಪೆನಿಗಳಲ್ಲಿ ಕೆಲಸ ಮಾಡಿದ್ದರು.

‘ಬೇಡರ ಕಣಪ್ಪ’ ಚಿತ್ರದ ಮೂಲಕ ಡಾ. ರಾಜ್ ಕುಮಾರ್ ನಾಯಕರಾಗಿ ಚಿತ್ರರಂಗ ಪ್ರವೇಶಿಸಿದರು. ಅದೇ ಸಿನಿಮಾದಲ್ಲಿ ಕಾಶೀನಾಥ ಶಾಸ್ತ್ರಿ ಪಾತ್ರದಲ್ಲಿ ನರಸಿಂಹ ರಾಜು ಚಿತ್ರರಂಗ ಪ್ರವೇಶವಾಯಿತು. ಮುಂದೆ ‘ಸ್ಕೂಲ್ ಮಾಸ್ಟರ್’, ರಣಧೀರ ಕಂಠೀರವ, ಜೇನು ಗೂಡು, ವೀರ ಕೇಸರಿ, ಕಸ್ತೂರಿ ನಿವಾಸ, ಶರಪಂಜರ, ಗಂಧದಗುಡಿ, ಕಿಟ್ಟುಪುಟ್ಟು, ಕಿಲಾಡಿ ಜೋಡಿ ಹೀಗೆ ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿದರು. 

೫೬ನೇ ವಯಸ್ಸಿನಲ್ಲಿ ೧೯೭೯ರ ಜುಲೈ ೨೦ರಂದು ಎಂದಿನಂತೆ ರಾತ್ರಿ ಉಪಾಹಾರ ಸೇವಿಸಿ ಮಲಗಿದ್ದರು. ಮುಂಜಾನೆ ೪.೩೦ರ ವೇಳೆಗೆ ತೀವ್ರ ಹೃದಯಾಘಾತದಿಂದ ನಿಧನರಾದರು. ನರಸಿಂಹರಾಜು ಅವರು ಹಾಸ್ಯವನ್ನು ಜನರು ಇನ್ನೂ ಸಹ ಮರೆತಿಲ್ಲ .