ಬೆಂಗಳೂರು: ಕಲ್ಲು ಗಣಿಗಾರಿಕೆಗೆ ಬಳಸುವ ಸ್ಫೋಟಕ ವಸ್ತುಗಳನ್ನು ಅಕ್ರಮವಾಗಿ ಮನೆಯಲ್ಲಿ ಇರಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಮೂವರನ್ನು ಸೋಲದೇವನಹಳ್ಳಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಬಂಧಿತರನ್ನು ಹೆಸರಘಟ್ಟದ ರಾಘವೇಂದ್ರ ಲೇಔಟ್ನ ಶ್ರೀನಿವಾಸ್ ಅಲಿಯಾಸ್ ಸೀನಪ್ಪ (40), ಹೆಸರಘಟ್ಟ ರಸ್ತೆಯ ಕಲ್ಲುಗುಡ್ಡದಹಳ್ಳಿಯ ಶಂಕರ್ (30) ಮತ್ತು ಕುಮಾರ್ (21) ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ ಸ್ಫೋಟಕ ಜೆಲ್ ಮತ್ತು ಪೊಟ್ಯಾಸಿಯಮ್ ನೈಟ್ರೇಟ್ ಅನ್ನು ವಶಪಡಿಸಿಕೊಂಡಿದ್ದಾರೆ.
ಮೂವರ ವಿರುದ್ಧ 1884ರ ಸ್ಫೋಟಕ ಕಾಯಿದೆಯಡಿ ಮತ್ತು ಸ್ಫೋಟಕ ವಸ್ತುಗಳಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ವರ್ತನೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.














