ಬೆಂಗಳೂರು: ಸಾಮಾನ್ಯವಾಗಿ ಹಿರಿಯರು ಮತ್ತು ವೈದ್ಯರು, ಡ್ರೈ ಫ್ರೂಟ್ಸ್ ತಿಂದರೆ ನಮ್ಮ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳುವುದನ್ನು ಗಮನಿಸಿಯೇ ಇರುತ್ತೇವೆ. ಯಾವ ಡ್ರೈ ಫ್ರೂಟ್ಸ್ನಿಂದ ನಮಗೇನು ಪ್ರಯೋಜನ ಎಂದು ತಿಳಿದುಕೊಂಡರೆ ಒಳ್ಳೆಯದು. ವಾಲ್ ನಟ್ ಅನ್ನು ಸೇವಿಸುವುದರಿಂದ ಹಲವು ರೀತಿಯ ಸಮಸ್ಯೆಗಳು ನಿವಾರಣೆಯಾಗುತ್ತವೆ.
ವಿವಿಧ ರೀತಿಯ ಖನಿಜಾಂಶಗಳು, ಆರೋಗ್ಯಕರ ಕೊಬ್ಬು ಹಾಗೂ ವಿಟಮಿನ್ಗಳನ್ನು ಹೊಂದಿರುವ ವಾಲ್ ನಟ್ ಮೆದುಳಿನ ಆರೋಗ್ಯಕ್ಕೆ ಬಹಳ ಒಳ್ಳೆಯದು. ಎರಡು ವಾಲ್‌ನಟ್‌ಗಳನ್ನು ಪ್ರತಿದಿನ ತಪ್ಪದೇ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಹಲವಾರು ಪ್ರಯೋಜನಗಳನ್ನು ಪಡೆಯಬಹುದು.
ವಾಲ್ ನಟ್ಸ್ ನಲ್ಲಿ ಒಮೆಗಾ-3 ಕೊಬ್ಬಿನಾಮ್ಲಗಳಿವೆ. ಇದು ಎಲ್ ಡಿಎಲ್ (ಕೆಟ್ಟ) ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಿ ಹೃದಯಾಘಾತ ಮತ್ತು ಪಾರ್ಶ್ವವಾಯುವಿನ ಅಪಾಯವನ್ನು ಕಡಿಮೆ ಮಾಡುತ್ತದೆ. ವಾಲ್‌ನಟ್ ಮೆದುಳಿನ ಕಾರ್ಯ ಮತ್ತು ಬೆಳವಣಿಗೆಗೆ ಅವಶ್ಯಕವಾಗಿರುವ ಕೊಬ್ಬಿನಾಮ್ಲಗಳನ್ನು ಒದಗಿಸುವುದರ ಜತೆಗೆ ಇದೊಂದು ಉತ್ತಮ ಆಹಾರ ಎಂದು ಕೆಲ ಅಧ್ಯಯನಗಳು ಹೇಳಿವೆ.
ಕಡಿಮೆ ಕ್ಯಾಲೋರಿಗಳನ್ನು ಹೊಂದಿರುವ ಇದು, ಹೆಚ್ಚಿನ ಪ್ರೋಟೀನ್, ಫೈಬರ್ ಮತ್ತು ಆರೋಗ್ಯಕರ ಕೊಬ್ಬುಗಳನ್ನು ಹೊಂದಿರುತ್ತವೆ. ಒಮೆಗಾ-3 ಕೊಬ್ಬಿನಾಮ್ಲಗಳು ರಕ್ತನಾಳಗಳ ವಿಶ್ರಾಂತಿ ಮತ್ತು ರಕ್ತದ ಹರಿವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಹಲವಾರು ಸೋಂಕುಗಳಿಂದ ಮತ್ತು ಅನಾರೋಗ್ಯದಿಂದ ಕಾಪಾಡಲು ಸಹಾಯ ಮಾಡುವ ಇದು, ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅಲ್ಲದೇ, ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಒಟ್ಟಾರೆ ವಾಲ್‌ನಟ್ ಉತ್ತಮ ಪೋಷಕಾಂಶಗಳನ್ನು ಹೊಂದಿರುವ ಆಹಾರವಾಗಿದ್ದು, ದೇಹವನ್ನು ಉತ್ತಮವಾಗಿಡಲು ಸಹಾಯ ಮಾಡುತ್ತದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.