ಮನೆ ರಾಜಕೀಯ ಚಾಮುಂಡಿ ಬೆಟ್ಟದಲ್ಲಿ ಈಶ್ವರಪ್ಪ, ಹೆಚ್ ಡಿ ಕುಮಾರಸ್ವಾಮಿ ಮುಖಾಮುಖಿ

ಚಾಮುಂಡಿ ಬೆಟ್ಟದಲ್ಲಿ ಈಶ್ವರಪ್ಪ, ಹೆಚ್ ಡಿ ಕುಮಾರಸ್ವಾಮಿ ಮುಖಾಮುಖಿ

0

ಮೈಸೂರು(Mysuru): ಚಾಮುಂಡಿ ಬೆಟ್ಟದಲ್ಲಿ(Chamundi hill) ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ(H.D.Kumarswamy) ಸಚಿವ ಕೆ.ಎಸ್.ಈಶ್ಚರಪ್ಪ(K.S.EShwarappa) ಮುಖಾಮುಖಿಯಾಗಿದ್ದು, ಉಭಯನಾಯಕರು ಕುಶಲೋಪರಿ ವಿಚಾರಿಸಿದರು.

ಚಾಮುಂಡೇಶ್ವರಿ ದರ್ಶನಕ್ಕೆ ಸಚಿವ ಕೆ..ಎಸ್.ಈಶ್ವರಪ್ಪ ಆಗಮಿಸಿದ್ದರೆ, ಜಲಧಾರೆ ಯಾತ್ರೆಗೆ ಚಾಲನೆ ನೀಡಲು ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗಮಿಸಿದ್ದು,

ಜೆಡಿಎಸ್ ಗೆ ಬಹುಮತ ನೀಡಿ:

ಈ ಬಾರಿ ಜೆಡಿಎಸ್‌ಗೆ ಬಹುಮತ ಕೊಡಿ. 5 ವರ್ಷದಲ್ಲಿ ರಾಜ್ಯದ ನೀರಾವರಿ ಯೋಜನೆ ಅನುಷ್ಠಾನ ಮಾಡುತ್ತೇನೆ. ಸಾಧ್ಯವಾಗದಿದ್ದರೆ ಜೆಡಿಎಸ್ ವಿಸರ್ಜನೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪುನರುಚ್ಚರಿಸಿದರು.

ಈ ಬಾರಿ ಕನ್ನಡಿಗರ ಬಹುಮತದ ಸರ್ಕಾರ ಬೇಕು. ಯಾವ ಪಕ್ಷದ ಜೊತೆಯೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. 30 ಅಥವಾ 40 ಸ್ಥಾನಕ್ಕಾಗಿ ಹೋರಾಟ ಅಲ್ಲ. ಪೂರ್ಣ ಪ್ರಮಾಣದ ಸರ್ಕಾರಕ್ಕೆ ಹೋರಾಟ ಮಾಡುವುದಾಗಿ ತಿಳಿಸಿದ ಅವರು, ನಮ್ಮದು ವಿಚಾರಾಧಾರಿತವಾದ ಹೋರಾಟ. ಧರ್ಮ ಧರ್ಮಗಳ ನಡುವೆ ಬೆಂಕಿ ಇಟ್ಟು ಮತ ಕೇಳುತ್ತಿಲ್ಲ. ರಾಜ್ಯದ ಅಭಿವೃದ್ದಿಗಾಗಿ ಮತ ಕೇಳುತ್ತಿದ್ದೇವೆ ಎಂದರು.

ಮೌನಿ ಬಸವರಾಜ ಬೊಮ್ಮಾಯಿ:

ನನ್ನ ಮಾತಲ್ಲ ನನ್ನ ಕೆಲಸ ಮುಖ್ಯ ಎಂದಿದ್ದ ಸಿಎಂಗೆ  ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದು,  ನಿಮ್ಮ ಯಾವ ಕೆಲಸ ಮಾತನಾಡುತ್ತಿದೆ.? ರಾಯಚೂರಿನಲ್ಲಿ ತಲವಾರ್ ಹಂಚಿದ್ದಾರೆ. ಯಾವ ಕಾರಣಕ್ಕೆ ತಲವಾರ್ ಹಂಚಿದ್ದಾರೆ.? ಅವರ‌ನ್ನು ನೀವು ಅರೆಸ್ಟ್ ಮಾಡಿದ್ದೀರಾ.? ಮೌನಿ‌ ಬಸವರಾಜ ಬೊಮ್ಮಾಯಿ ಅವರೇ ಎಂದು ಪ್ರಶ್ನಿಸಿದರು.

ರಾಯಚೂರಿನಲ್ಲಿ ಲವ್ ಕೇಸರಿ ವಿಚಾರ. ಯಾವುದೇ ಪ್ರೀತಿಯಲ್ಲಿ ಬಾಂಧವ್ಯ ಮುಖ್ಯ. ಪರಸ್ಪರ ಪ್ರೀತಿಸುವವರಿಗೆ ತೊಂದರೆ ಕೊಡಬಾರದು. ಅವರು ಯಾವ ಧರ್ಮದವರೇ ಆಗಿರಲಿ. ಅವರನ್ನು ನಿಯಂತ್ರಿಸುವ ಕೆಲಸ ಮಾಡಬಾರದು ಎಂದರು.

ಅಧಿಕೃತ ಚುನಾವಣಾ ಪ್ರಚಾರ ಆರಂಭಿಸಿದ್ದೇನೆ:

ಜನತಾ ಜಲಧಾರೆ ಯಾತ್ರೆ, ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಪರ್ಯಾಯವಲ್ಲ. ಅದು ಶೋಗಾಗಿ ನಡೆಸಿದ ಯಾತ್ರೆ. ಅವರು ನೇರವಾಗಿ ರಾಜಕೀಯ ಯಾತ್ರೆ ಅಂತಾ ಹೇಳಲಿಲ್ಲ. ನಮ್ಮದು ಜನರ ಮುಂದೆ ಸಮಸ್ಯೆ ಬಿಚ್ಚಿಡಲು ಯಾತ್ರೆ. ಈ ಮೂಲಕ ಮುಂದಿನ ಚುನಾವಣೆಗಾಗಿ ಯಾತ್ರೆ. ಯಾತ್ರೆ ಮೂಲಕ ಅಧಿಕೃತ ಚುನಾವಣಾ ಪ್ರಚಾರ ಆರಂಭಿಸಿದ್ದೇನೆ. ಇದನ್ನು ನಾನು ನೇರವಾಗಿ ಹೇಳುತ್ತಿದ್ದಾನೆ ಎಂದರು.

ಕಲ್ಲಂಗಡಿ ಒಡೆದಾಗ ತೋರಿದ ಅನುಕಂಪ, ತಲೆ ಒಡೆದಾಗಲೂ ತೋರಿ ಎಂಬ ಸಿ ಟಿ ರವಿ ಹೇಳಿಕೆಗೆ ಪ್ರತಿಕ್ರಿಯಿಸಿ, ನಿಮ್ಮ ಮಾತಿನ ಅರ್ಥ ಏನು.? ರಾಜ್ಯದಲ್ಲಿ ತಲೆ ಒಡೆಯುತ್ತಾ ಇರುತ್ತೇವೆ ಅಂತಾನಾ ? ನೀವು ತಲೆ ಒಡೆಯುತ್ತಿರಿ ನಾವು ಸಾಂತ್ವನ ಹೇಳಬೇಕಾ ಅನ್ನೋದಾ. ಎಂದು ಪ್ರಶ್ನಿಸಿದರು.

ನಮ್ಮ ಹಾಸನ ಜಿಲ್ಲೆಯಲ್ಲಿ ಯಾವ ಜಾತ್ರೆಯಲ್ಲೂ ಮುಸ್ಲಿಂಮರು ನಿರ್ಬಂಧ ಹೇರುವುದಕ್ಕೆ ಅವಕಾಶ ಕೊಡುವುದಿಲ್ಲ. ಚೆನ್ನಕೇಶವ ಜಾತ್ರೆಯಲ್ಲಿ ಸಮಸ್ಯೆ ಆಗಿರುವುದು ಗಮನಕ್ಕೆ ಬಂದಿದೆ. ಖುದ್ದು ರೇವಣ್ಣ ಅವರಿಗೆ ಸಮಸ್ಯೆ ಬಗೆಹರಿಸುವಂತೆ ಹೇಳಿದ್ದೇನೆ. ನಿರ್ಬಂಧ ತೆರವು ಮಾಡಿಸಿ ಅವರಿಗೆ ವ್ಯಾಪಾರಕ್ಕೆ ಅವಕಾಶ ಕೊಡಿಸುತ್ತೇನೆ. ಹಾಸನ ಜಿಲ್ಲೆ ಮಾತ್ರ ಅಲ್ಲ ಎಲ್ಲಾ ಜಿಲ್ಲೆಗಳಲ್ಲೂ ನಿರ್ಬಂಧ. ತೆರವಿಗೆ ನನ್ನ ಹೋರಾಟ ಇರುತ್ತದೆ ಎಂದರು.

ಸಿದ್ದರಾಮಯ್ಯ ಅವರದ್ದು ಮನಸ್ಸಿನ ಮಾತು:

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯಿರಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಭಾಷಣದಲ್ಲಿ ಸಿದ್ದರಾಮಯ್ಯ ತಮ್ಮ ಮನಸ್ಸಿನ ಮಾತನ್ನು ನೇರವಾಗಿ ಹೇಳಿದ್ದಾರೆ. ಅದು ಅವರ ಬಾಯ್ತಪ್ಪಿನಿಂದ ಬಂದ ಮಾತಲ್ಲ. ಅದು ಅವರ ಮನಸ್ಸಿನ ಮಾತು ಎಂದು ವ್ಯಂಗ್ಯವಾಡಿದರು.

ಪಕ್ಷಕ್ಕೆ ಬರುವವವರಿಗೆ ಸ್ವಾಗತ:

ನಮ್ಮ ಪಕ್ಚ ಬಿಟ್ಟುಹೋಗುವ ಮನಸ್ಸು ಮಾಡಿದವರಿಗೆ ಈಗ ಜ್ಞಾನೋದಯವಾಗುತ್ತಿದೆ‌. ಜ್ಞಾನೋದಯವಾಗಿ ಅವರು ಪಕ್ಷದಲ್ಲೇ ಉಳಿದರೆ ನನಗೇನು ಸಮಸ್ಯೆ ಇಲ್ಲ. ಪಕ್ಷ ಬಿಟ್ಟವರೂ‌ ಕೂಡಾ ಪಕ್ಷಕ್ಕೆ ಬರುವ ಮಾತಾಡುತ್ತಿದ್ದಾರೆ. ಅವರು ಬಂದರೂ ಸಂತೋಷ.  ಯಾವುದೇ ಪಕ್ಷದಿಂದ ಯಾರೇ ನಮ್ಮ ಪಕ್ಷಕ್ಕೆ ಬಂದರೂ ಸ್ವಾಗತ. ಆದರೆ ಅಧಿಕಾರಕ್ಕಾಗಿ ಪಕ್ಷಕ್ಕೆ ಬಂದರೆ ಅಂತವರಿಗೆ ನಮ್ಮಲ್ಲಿ ಅವಕಾಶ ಇಲ್ಲ. ಈ‌ ಮಾತು ಜಿ.ಟಿ.ದೇವೇಗೌಡರಿಗೂ ಕೂಡಾ ಅನ್ವಯ ಎಂದು ಹೇಳಿದರು.