ಮನೆ ಕ್ರೀಡೆ ಅಗ್ರ ಹತ್ತರಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

ಅಗ್ರ ಹತ್ತರಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

0

ವೆಸ್ಟ್ ಇಂಡೀಸ್ ವಿರುದ್ಧ ಅತ್ಯುತ್ತಮ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರನ್ನು ಹೊರತುಪಡಿಸಿ ಭಾರತದ ಯಾವುದೇ ಬ್ಯಾಟರ್ ಟಾಪ್-10 ಪಟ್ಟಿಯಲ್ಲಿ ಕಾಣಿಸಿಕೊಂಡಿಲ್ಲ.

Join Our Whatsapp Group

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಟೆಸ್ಟ್ ಬ್ಯಾಟರ್ ​ಗಳ​ ಹೊಸ ರ‍್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ನ್ಯೂಝಿಲ್ಯಾಂಡ್​ನ  ಕೇನ್ ವಿಲಿಯಮ್ಸನ್ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದಾರೆ.

ಹಾಗೆಯೇ ಕಳೆದ ಬಾರಿ ದ್ವಿತೀಯ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್ 4ನೇ ಸ್ಥಾನಕ್ಕೆ ಕುಸಿದಿದ್ದು, ಮಾರ್ನಸ್ ಲಾಬುಶೇನ್ ಶ್ರೇಯಾಂಕ ಪಟ್ಟಿಯಲ್ಲಿ ಮೇಲೇರಿದ್ದಾರೆ.

ಮತ್ತೊಂದೆಡೆ ಟಾಪ್-10 ಪಟ್ಟಿಯಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರ ಮಾತ್ರ ಸ್ಥಾನ ಪಡೆದಿದ್ದಾರೆ. ಅದು ಕೂಡ ಹತ್ತರಲ್ಲಿ ಕೊನೆಯ ಸ್ಥಾನ ಎಂಬುದು ವಿಶೇಷ. ಅದರಂತೆ ಟೆಸ್ಟ್ ಬ್ಯಾಟರ್ ​ಗಳ ಹೊಸ ಶ್ರೇಯಾಂಕ ಪಟ್ಟಿ ಈ ಕೆಳಗಿನಂತಿದೆ…

1- ಕೇನ್ ವಿಲಿಯಮ್ಸನ್ (ನ್ಯೂಜಿಲೆಂಡ್)- 883 ಪಾಯಿಂಟ್ಸ್​

2- ಮಾರ್ನಸ್ ಲಾಬುಶೇನ್ (ಆಸ್ಟ್ರೇಲಿಯಾ)- 869 ಪಾಯಿಂಟ್ಸ್​

3- ಜೋ ರೂಟ್ (ಇಂಗ್ಲೆಂಡ್)- 852 ಪಾಯಿಂಟ್ಸ್​

4- ಟ್ರಾವಿಸ್ ಹೆಡ್ (ಆಸ್ಟ್ರೇಲಿಯಾ)- 847 ಪಾಯಿಂಟ್ಸ್​

5- ಬಾಬರ್ ಆಝಂ (ಪಾಕಿಸ್ತಾನ್)- 835 ಪಾಯಿಂಟ್ಸ್​

6- ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ)- 833 ಪಾಯಿಂಟ್ಸ್​

7- ಡೇರಿಲ್ ಮಿಚೆಲ್ (ನ್ಯೂಜಿಲೆಂಡ್)- 792 ಪಾಯಿಂಟ್ಸ್​

8- ಉಸ್ಮಾನ್ ಖ್ವಾಜಾ (ಆಸ್ಟ್ರೇಲಿಯಾ)- 788 ಪಾಯಿಂಟ್ಸ್​

9- ದಿಮುತ್ ಕರುಣರತ್ನೆ (ಶ್ರೀಲಂಕಾ)- 759 ಪಾಯಿಂಟ್ಸ್​

10- ರೋಹಿತ್ ಶರ್ಮಾ (ಭಾರತ)- 759 ಪಾಯಿಂಟ್ಸ್