ಮನೆ ರಾಜ್ಯ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಬಂದರೆ ಕಾಲೇಜು ಆವರಣದೊಳಗೆ ಪ್ರವೇಶ ನೀಡಿ: ಡಿಸಿ ಡಾ.ಕೆ.ವಿ.ರಾಜೇಂದ್ರ

ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ಬಂದರೆ ಕಾಲೇಜು ಆವರಣದೊಳಗೆ ಪ್ರವೇಶ ನೀಡಿ: ಡಿಸಿ ಡಾ.ಕೆ.ವಿ.ರಾಜೇಂದ್ರ

0

ಮೈಸೂರು: ದ್ವಿಚಕ್ರ ವಾಹನ ಬಳಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಿ ಬಂದರೆ ಮಾತ್ರ ಕಾಲೇಜು ಆವರಣದೊಳಗೆ ‍ಪ್ರವೇಶ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದರು.

Join Our Whatsapp Group

ನಗರದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಲ್ಲಿ ಮಂಗಳವಾರ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿ, ‘ಜಿಲ್ಲೆಯ ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳು ಕಡ್ಡಾಯ ಹೆಲ್ಮೆಟ್‌ ನೀತಿ ಜಾರಿಗೊಳಿಸಬೇಕು’ ಎಂದರು.

ಕಾಲೇಜುಗಳಲ್ಲಿ ಸಂಚಾರ ನಿಯಮಗಳನ್ನು ಅನುಸರಿಸದೆ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸುತ್ತಿರುವುದು ಹೆಚ್ಚುತ್ತಿದೆ. ಈ ಬಗ್ಗೆ ಆಡಳಿತ ಮಂಡಳಿ ಸೂಚನೆಯನ್ನು ನೀಡಬೇಕು ಎಂದು ತಿಳಿಸಿದರು.

ತಿ.ನರಸೀಪುರದಲ್ಲಿ ನಡೆದ ಅಪಘಾತದ ವಿಚಾರವಾಗಿ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಿ ಸರಿಯಾದ ಕ್ರಮ ಕೈಗೊಳ್ಳಬೇಕು. ರಸ್ತೆ ಅಪಘಾತಗಳ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಬೇಕು ಎಂದು ಎಎಸ್‌ ಪಿ ನಂದಿನಿ ಅವರಿಗೆ ಸೂಚಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಮಳೆ ವೇಳೆ ರಸ್ತೆ ಅಪಘಾತ ಹೆಚ್ಚಾಗುತ್ತಿದೆ. ರಸ್ತೆ ಉಬ್ಬುಗಳನ್ನು ವೈಜ್ಞಾನಿಕವಾಗಿ ನಿರ್ಮಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ರಸ್ತೆಗಳಲ್ಲಿ ಸುರಕ್ಷತಾ ನಿಯಮಾವಳಿಗಳನ್ನು ಅಳವಡಿಸಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಬoಧಿಸಿದoತೆ ಕಾಮಗಾರಿಗಳು ನಡೆಯುತ್ತಿರುವ ರಸ್ತೆಗಳಲ್ಲಿ ಬಹು ಮಾದರಿ ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದರು.