ಉಡುಪಿ: ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಉಡುಪಿಗೆ ಆಗಮಿಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಅವರ ಜೊತೆ ಸಭೆ ನಡೆಸಿ ಪ್ರಕರಣದ ಮಾಹಿತಿ ಪಡೆದುಕೊಂಡಿದ್ದಾರೆ.
ಇನ್ನು ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಒಂದು ಸೂಕ್ಷ್ಮ ವಿಚಾರವಾಗಿದ್ದು, ಇದನ್ನು ಯಾರು ರಾಜಕೀಕರಣಗೊಳಿಸಬಾರದು. ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ತನಿಖೆ ಇನ್ನು ಮುಗಿದಿಲ್ಲ. ಇದು ತುಂಬಾ ಸಮಯ ತೆಗೆದುಕೊಳ್ಳುತ್ತದೆ. ಒಂದು ದಿನದಲ್ಲಿ ನಿರ್ಧಾರ ಮಾಡಲು ಆಗಲ್ಲ. ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ ಎಂದು ಹೇಳಿದರು.
ಕಾಲೇಜಿನವರು ಪತ್ರಿಕಾಗೋಷ್ಠಿ ಮಾಡಿ ವಿಡಿಯೋ ಡಿಲೀಟ್ ಬಗ್ಗೆ ಹೇಳಿದ್ದಾರೆ. ಆಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡುವವರು ಕಾನೂನು ಬಗ್ಗೆ ಅರ್ಥ ಮಾಡಿಕೊಳ್ಳಬೇಕು. ಯಾರು ವದಂತಿಗಳನ್ನು ಹರಡಬಾರದು. ಯುವತಿಯರ ರಕ್ಷಣೆ ನಮಗೆ ಮುಖ್ಯ. ಯುವತಿಯರು ನಮ್ಮ ಕುಟುಂಬದವರು. ಅವರ ಸಮಸ್ಯೆಗಳನ್ನು ಬಗೆಹರಿಸಬೇಕಾಗಿರುವುದು ಮುಖ್ಯ ಎಂದು ಹೇಳಿದರು.
ವಿದ್ಯಾರ್ಥಿಗಳು ನಮ್ಮ ದೇಶದ ಭವಿಷ್ಯ ಅವರನ್ನು ರಕ್ಷಣೆ ಮಾಡಬೇಕು. ನಾವು ಎಲ್ಲರೂ ಜವಾಬ್ದಾರಿಯಾಗಿ ವರ್ತಿಸಬೇಕು. ನಾನು ಯಾರನ್ನು ದೂಷಿಷಲು, ಧಾರ್ಮಿಕ ಅಥವಾ ರಾಜಕೀಯ ಮಾಡಲು ಇಲ್ಲಿ ಬಂದಿಲ್ಲ, ಒಬ್ಬ ಪೋಷಕರಾಗಿ ಇದನ್ನು ಬಗೆಹರಿಸಬೇಕು. ರಾಜಕಾರಣಿಗಳು ರಾಜಕೀಯ ಪಕ್ಷಗಳು ಇದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದರು.
ಒಬ್ಬ ಮಹಿಳಾ ಆಯೋಗದ ಸದಸ್ಯೆಯಾಗಿ ಬಂದಿದ್ದೇನೆ. ಸಂತ್ರಸ್ತೆ ಹಾಗೂ ಆರೋಪಿಗಳನ್ನು ಭೇಟಿ ಮಾಡುತ್ತೇನೆ. ಅವರು ಯಾವ ಕಾರಣಕ್ಕೆ ವಿಡಿಯೋ ಮಾಡಿದರ ? ಯಾರಾದರೂ ಹೇಳಿದಕ್ಕೆ ವಿಡಿಯೋ ಮಾಡಿದ್ದಾರಾ? ವಿಡಿಯೋ ತಮಾಷೆಗೆ ಮಾಡಿದ್ದ? ಈ ಬಗ್ಗೆ ಅವರಿಂದ ಮಾಹಿತಿ ಪಡೆಯುತ್ತೇನೆ. ಸದ್ಯ ಸಾಮಾಜಿಕ ಜಾಲತಾಣ ತಾಂತ್ರಿಕತೆಯಿಂದ ಪ್ರತಿಯೊಬ್ಬರು ತನಿಖಾಧಿಕಾರಿ ನ್ಯಾಯಾಧೀಶರಾಗಲು ಮುಂದಾಗಿದ್ದಾರೆ. ಇದನ್ನು ಯಾರು ಮಾಡಬೇಡಿ . ವದಂತಿಗಳನ್ನು ಯಾರು ಹರಡಬೇಡಿ. ಕಾನೂನಿಗೆ ಅದರ ಕೆಲಸ ಮಾಡಲು ಬಿಡಿ ಎಂದು ತಿಳಿಸಿದರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.