ಮನೆ ಅಪರಾಧ ಮಳವಳ್ಳಿಯಲ್ಲಿ ವಾಹನ ಕಳ್ಳರ ಬಂಧನ

ಮಳವಳ್ಳಿಯಲ್ಲಿ ವಾಹನ ಕಳ್ಳರ ಬಂಧನ

0

ಮಂಡ್ಯ: ಮಳವಳ್ಳಿಯಲ್ಲಿ ಪೊಲೀಸ್ ಪೇದೆಯೊಬ್ಬರ ಬೈಕ್ ಸೇರಿದಂತೆ ತಾಲೂಕಿನ ವಿವಿಧೆಡೆ ವಾಹನಗಳನ್ನು ಕಳವು ಮಾಡಿ ಮಾರಾಟ ಮಾಡಿದ್ದ ಇಬ್ಬರು ಆರೋಪಿಗಳನ್ನು ಹಲಗೂರು ವೃತ್ತ ನಿರೀಕ್ಷಕ ಬಿ.ಎಸ್.ಶ್ರೀಧರ್ ನೇತೃತ್ವದ ತನಿಖಾ ತಂಡ ಬಂಧಿಸಿದ್ದಾರೆ ಎಂದು ವರದಿಯಾಗಿದೆ.

Join Our Whatsapp Group

ಕಿರುಗಾವಲು ಗ್ರಾಮದ ಅಬ್ದುಲ್ ಮಸೂದ್, ರಶೀದ್ ಖಾನ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

ಆರೋಪಿಗಳು ಮಳವಳ್ಳಿ ಆಟೋ ಸೇರಿದಂತೆ ಬೈಕ್‌ ಗಳನ್ನು ಕಳ್ಳತನ ಮಾಡುತ್ತಿದ್ದರು. ಈ ಬಗ್ಗೆ ಅನೇಕ ಪ್ರಕರಣಗಳು ದಾಖಲಾಗಿದ್ದು, ತನಿಖೆಗಿಳಿದ ಪೊಲೀಸರು ಆರೋಪಿಗಳನ್ನು ಬಂಧಿಸಿ, ಕಳ್ಳತನ ಮಾಡಿದ್ದ ಬೈಕ್‌ ಗಳನ್ನು ವಶಕ್ಕೆ ಪಡೆದಿದ್ದಾರೆ.