ಮನೆ ಕಾನೂನು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ:ಆರೋಪಿಗೆ ಶಿಕ್ಷೆ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ:ಆರೋಪಿಗೆ ಶಿಕ್ಷೆ

0

ಮಂಡ್ಯ:- ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ 20 ವರ್ಷ ಶಿಕ್ಷೆ ವಿಧಿಸಿ ನಗರದ ನ್ಯಾಯಲಯ ಆದೇಶ ಮಾಡಿದೆ.

Join Our Whatsapp Group


ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ಬಿದರಕರೆ ಗ್ರಾಮದ ರವಿ(35)ಶಿಕ್ಷೆಗೆ ಒಳಗಾದ ಆರೋಪಿ.ಕಳೆದ 2019 ಸಾಲಿನಲ್ಲಿ ಅದೇ ಗ್ರಾಮದ 5 ವರ್ಷದ ಅಪ್ರಾಪ್ತ ಬಾಲಕಿಯನ್ನು ಬಾ ನಮ್ಮ ಹೊಲದ ಕಡೆ ತಿರುಗಾಡಿಕೊಂಡು ಬರೋಣವೆಂದು ಸ್ಕೂಟರ್‌ನಲ್ಲಿ ಲಾಳನಕೆರೆ ಕಡೆಗೆ ಕರೆದುಕೊಂಡು ಯಾವುದೋ ಕಲ್ಲು ಬಂಡೆಯ ಬಳಿಯ ಜಮೀನಿನ ಹತ್ತಿರ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿ,ಯಾರಿಗಾದರೂ ಹೇಳಿದರೆ ಹೊಡೆಯುತ್ತೇನೆಂದು ಬೆದರಿಕೆ ಹಾಕಿದ್ದರು.
ಈ ಕುರಿತು ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ಅಂದಿನ ಸರ್ಕಲ್ ಇನ್ಸ್ಪೆಕ್ಟರ್ ನಂಜಪ್ಪ ಅವರು ದೋಷರೋಪಣಾ ಪತ್ರ ಸಲ್ಲಿಸಿದರು. ಈ ಕುರಿತು ವಿಚಾರಣೆ ನಡೆಸಿದ ಮಂಡ್ಯ ಅಧಿಕ ಸತ್ರ ಮತ್ತು ತ್ವರಿತಗತಿ 2ನೇ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ಕೆ.ಎ ನಾಗಜ್ಯೋತಿ ಅವರು ಆರೋಪಿಗೆ ಐಪಿಸಿ ಅಡಿ ಅಪರಾಧಕ್ಕೆ 20 ವರ್ಷ ಸಜೆ ಮತ್ತು 50 ಸಾವಿರ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 5 ವರ್ಷಗಳ ಸಾದಾ ಶಿಕ್ಷೆ ಹಾಗೂ ಐಪಿಸಿ ಕಲಂ 366 ಅಡಿಯಲ್ಲಿನ ಅಪರಾಧಕ್ಕೆ 2 ವರ್ಷಗಳ ಶಿಕ್ಷೆ ಮತ್ತು25 ಸಾವಿರ ರೂ.ಗಳ ದಂಡ, ದಂಡ ಪಾವತಿಸಲು ತಪ್ಪಿದಲ್ಲಿ 6 ತಿಂಗಳು ಸಾದಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕ ಹೆಬ್ಬಕವಾಡಿ ನಾಗರಾಜು ಅವರು ವಾದ ಮಂಡಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.