ಮನೆ ರಾಜ್ಯ ವಿಸಿ ನಾಲೆಗೆ ಕಾರು ಬಿದ್ದು ನಾಪತ್ತೆಯಾಗಿದ್ದ ಚಾಲಕನ ಮೃತದೇಹ ಪತ್ತೆ

ವಿಸಿ ನಾಲೆಗೆ ಕಾರು ಬಿದ್ದು ನಾಪತ್ತೆಯಾಗಿದ್ದ ಚಾಲಕನ ಮೃತದೇಹ ಪತ್ತೆ

0


ಮಂಡ್ಯ: ವಿಸಿ ನಾಲೆಗೆ ಕಾರು ಬಿದ್ದು ಚಾಲಕ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಲೋಕೇಶ್ ಮೃತದೇಹ ಪತ್ತೆಯಾಗಿದೆ.

Join Our Whatsapp Group


ಘಟನಾ ಸ್ಥಳ ಸಮೀಪದ ವಿಸಿ ನಾಲೆಯ ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ.
ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಬಳಿಯ ವಿಸಿ ನಾಲೆಯಲ್ಲಿ ನಿನ್ನೆ(ಗುರುವಾರ) ಚಾಲಕನ ನಿಯಂತ್ರಣ ತಪ್ಪಿ ಕಾರು ನಾಲೆಗೆ ಬಿದ್ದಿತ್ತು. ತಡೆಗೋಡೆ ಇಲ್ಲದ ಕಾರಣ ಅಪಘಾತ ಸಂಭವಿಸಿತ್ತು.
ಮುಳುಗಿದ್ದ ಕಾರನ್ನು ಹೊರತೆಗೆಯಲಾಗಿತ್ತು. ಆದರೆ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದ ಚಾಲಕ ಲೋಕೇಶ್ ಮೃತದೇಹದ ಪತ್ತೆಯಾಗಿರಲಿಲ್ಲ.
ಸ್ಥಳೀಯ ಈಜುಗಾರರು, ಅಗ್ನಿಶಾಮಕ ಸಿಬ್ಬಂದಿಗಳು ನಿನ್ನೆ ರಾತ್ರಿ 8:30ರ ವರೆಗೂ ಹುಡುಕಾಟ ನಡೆಸಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ.
ಇಂದು ಬೆಳಿಗ್ಗೆ 7:45ರ ಸುಮಾರಿಗೆ ಲೋಕೇಶ್ ಮೃತದೇಹ ಪತ್ತೆಯಾಗಿದ್ದು, ಸ್ಥಳದಲ್ಲಿ ಮೃತ ಲೋಕೇಶ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.