ಮನೆ ಶಿಕ್ಷಣ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತೊಂದು ಪೂರಕ ಪರೀಕ್ಷೆ: ವೇಳಾಪಟ್ಟಿ ಪ್ರಕಟ

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮತ್ತೊಂದು ಪೂರಕ ಪರೀಕ್ಷೆ: ವೇಳಾಪಟ್ಟಿ ಪ್ರಕಟ

0

ಬೆಂಗಳೂರು: ಅನುತ್ತೀರ್ಣರಾದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಮತ್ತೊಂದು ಪೂರಕ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದ್ದು, ಇಂದು ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಿದೆ.

Join Our Whatsapp Group

ಆಗಸ್ಟ್ 21ರಿಂದ ಸೆಪ್ಟೆಂಬರ್ 2ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ.

2022-23ನೇ ಸಾಲಿನಲ್ಲಿ ಹಾಗೂ ಅದಕ್ಕಿಂತ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮಾತ್ರ ಈ ಪರೀಕ್ಷೆಗೆ ನೋಂದಾಯಿಸಲು ಅರ್ಹರಾಗಿರುತ್ತಾರೆ.

ಫಲಿತಾಂಶ ತಿರಸ್ಕರಿಸಲು ಸದರಿ ಪರೀಕ್ಷೆಯಲ್ಲಿ ಅವಕಾಶವಿರುವುದಿಲ್ಲ. ಪರೀಕ್ಷೆ ಸಂಬಂಧಿಸಿದ ಸುತ್ತೋಲೆ ಹಾಗೂ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ https://kseab.karnataka.gov.in ಪ್ರಕಟಿಸಲಾಗಿದೆ.

ವೇಳಾಪಟ್ಟಿ ಹೀಗಿದೆ:

ಆಗಸ್ಟ್ 21: ಕನ್ನಡ

ಆಗಸ್ಟ್ 22: ರಸಾಯನಶಾಸ್ತ್ರ

ಆಗಸ್ಟ್ 23: ಸಮಾಜ ಶಾಸ್ತ್ರ,

ಆಗಸ್ಟ್ 24: ವ್ಯವಹಾರ ಅಧ್ಯಯನ

ಆಗಸ್ಟ್ 25: ಇತಿಹಾಸ

ಆಗಸ್ಟ್ 26: ಇಂಗ್ಲೀಷ್‌

ಆಗಸ್ಟ್ 28: ಭೌತಶಾಸ್ತ್ರ, ಮನಃಶಾಸ್ತ್ರ

ಆಗಸ್ಟ್ 29: ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ

ಆಗಸ್ಟ್ 30: ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ

ಆಗಸ್ಟ್ 31: ಹಿಂದಿ

ಸೆಪ್ಟೆಂಬರ್ 01: ಅರ್ಥಶಾಸ್ತ್ರ, ಜೀವಶಾಸ್ತ್ರ

ಸೆಪ್ಟೆಂಬರ್ 02: ತೆಲುಗು, ತಮಿಳು, ಉರ್ದು ಇತರ ಭಾಷೆ