ಮನೆ ರಾಷ್ಟ್ರೀಯ ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಆರು ಮಂದಿ ಸಾವು, 20 ಮಂದಿಗೆ ಗಾಯ

ಮಹಾರಾಷ್ಟ್ರದಲ್ಲಿ ಭೀಕರ ರಸ್ತೆ ಅಪಘಾತ: ಆರು ಮಂದಿ ಸಾವು, 20 ಮಂದಿಗೆ ಗಾಯ

0

ಮುಂಬೈ: ಮಹಾರಾಷ್ಟ್ರದ ಬುಲ್ದಾನಾದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟು, 20 ಮಂದಿ ಗಾಯಗೊಂಡಿದ್ದಾರೆ.

Join Our Whatsapp Group

ಪೊಲೀಸರ ಪ್ರಕಾರ, ಮಲ್ಕಾಪುರ ಪ್ರದೇಶದ ಎನ್‌ ಎಚ್ 53 ರಲ್ಲಿ ನಂದೂರ್ ನಾಕಾ ಮೇಲ್ಸೇತುವೆಯಲ್ಲಿ ತಡರಾತ್ರಿ 2.30 ರ ಸುಮಾರಿಗೆ ಎರಡು ಬಸ್‌ ಗಳು ಡಿಕ್ಕಿಯಾಗಿವೆ.

ಬಾಲಾಜಿ ಟ್ರಾವೆಲ್ಸ್ ಹೆಸರಿನ ಕಂಪನಿಯ ಒಡೆತನದ ಬಸ್‌ ಗಳಲ್ಲಿ ಒಂದು ಅಮರನಾಥ ಯಾತ್ರೆಯಿಂದ ಹಿಂಗೋಲಿ ಜಿಲ್ಲೆಗೆ ಮರಳುತ್ತಿದ್ದರೆ, ಇನ್ನೊಂದು ರಾಯಲ್ ಟ್ರಾವೆಲ್ಸ್ ಕಂಪನಿಯ ಮಾಲೀಕತ್ವದ ನಾಸಿಕ್ಮ್‌ಗೆ ತೆರಳುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಂದೂರ್ ನಾಕಾದಲ್ಲಿ ಒಂದು ಬಸ್ ಇನ್ನೊಂದನ್ನು ಹಿಂದಿಕ್ಕಿತು, ನಂತರ ಎರಡೂ ಡಿಕ್ಕಿ ಹೊಡೆದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡಿರುವ ಸುಮಾರು 20 ಮಂದಿಯನ್ನು ಬುಲ್ದಾನಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣಪುಟ್ಟ ಗಾಯಗಳೊಂಡಿರುವ 32 ಪ್ರಯಾಣಿಕರಿಗೆ ಸಮೀಪದ ಗುರುದ್ವಾರದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಅಮರನಾಥದಿಂದ ಹಿಂತಿರುಗುತ್ತಿದ್ದ ಬಸ್ಸಿನ ಚಾಲಕ ಕೂಡ ಮೃತಪಟ್ಟವರಲ್ಲಿ ಸೇರಿದ್ದಾರೆ. ಬಸ್ ಅನ್ನು ರಸ್ತೆಯಿಂದ ತೆರವು ಮಾಡಲಾಗಿದ್ದು, ಸಂಚಾರವನ್ನು ಪುನಃಸ್ಥಾಪಿಸಲಾಗಿದೆ ಎಂದು ಹೆದ್ದಾರಿ ಪೊಲೀಸರು ತಿಳಿಸಿದ್ದಾರೆ.