ಮನೆ ರಾಜ್ಯ ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್​​​ ಪ್ರವಹಿಸಿ ರೈತ ಸಾವು

ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್​​​ ಪ್ರವಹಿಸಿ ರೈತ ಸಾವು

0

ಮೈಸೂರು: ಜಿಲ್ಲೆ ಹೆಚ್.ಡಿ‌.ಕೋಟೆ ತಾಲೂಕಿನ ಭಾರತಿಪುರ ಗ್ರಾಮದ ಹೊಲದಲ್ಲಿ ಕೆಲಸ ಮಾಡುವಾಗ ವಿದ್ಯುತ್​​​ ಪ್ರವಹಿಸಿ ರೈತ ಮೃತಪಟ್ಟ ಘಟನೆ ನಡೆದಿದೆ.

Join Our Whatsapp Group

ಹೊಲದಲ್ಲಿ ಅರಿಶಿನ ಬೆಳೆಗೆ ಔಷಧಿ ಸಿಂಪಡಿಸುತ್ತಿದ್ದಾಗ ಹೊಲದಲ್ಲಿ ಹಾದು ಹೋಗಿದ್ದ ವಿದ್ಯುತ್ ಕಂಬದ ತಂತಿ ತಗುಲಿ ರೈತ ನಾಗರಾಜು(37) ಸಾವನ್ನಪ್ಪಿದ್ದಾರೆ.

ವಿದ್ಯುತ್ ತಂತಿ‌ ಕೆಳಗೆ ಹಾದು ಹೋಗಿದ್ದರ ಬಗ್ಗೆ ಈ ಹಿಂದೆಯೇ ರೈತರು ದೂರು ನೀಡಿದ್ದರು. ವಿದ್ಯುತ್​ ತಂತಿ ತೆರವು ಬಗ್ಗೆ ಹಲವು ಬಾರಿ ದೂರು ನೀಡಿದ್ದರು. ಆದರೂ ಅಧಿಕಾರಿಗಳು ಕ್ರಮಕೈಗೊಂಡಿಲ್ಲ ಎಂದು ಗ್ರಾಮಸ್ಥರು ಆರೋಪ ಮಾಡಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯವೇ ರೈತನ ಸಾವಿಗೆ ಕಾರಣ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಹೆಚ್.ಡಿ‌.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.