ಮನೆ ರಾಜ್ಯ ಶಿವಮೊಗ್ಗ: ಟ್ಯಾಕ್ಸಿ ಚಾಲಕ ಆತ್ಮಹತ್ಯೆ

ಶಿವಮೊಗ್ಗ: ಟ್ಯಾಕ್ಸಿ ಚಾಲಕ ಆತ್ಮಹತ್ಯೆ

0

ಶಿವಮೊಗ್ಗ: ಟ್ಯಾಕ್ಸಿ ಚಾಲಕ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದ ವಿನೋಬನಗರ ಬಡಾವಣೆಯ 2 ನೇ ಹಂತದಲ್ಲಿ ನಡೆದಿದೆ.

Join Our Whatsapp Group

ಸುರೇಶ್ (45) ಆತ್ಮಹತ್ಯೆ ಮಾಡಿಕೊಂಡ ಟ್ಯಾಕ್ಸಿ ಚಾಲಕ.

ಇತ ಟೂರಿಸ್ಟ್ ಟ್ಯಾಕ್ಸಿ ಚಾಲನೆ ಮಾಡಿಕೊಂಡಿದ್ದ. ನಿನ್ನೆ (ಜು.31) ರಾತ್ರಿ ಮನೆಗೆ ಬಂದು ಊಟ ಮಾಡಿ ರೂಮಿನೊಳಗೆ ಹೋಗಿದ್ದ. ಮುಂಜಾನೆ ಕೊಠಡಿಯಲ್ಲಿ ದೀಪ ಉರಿಯುತ್ತಿದ್ದ ಹಿನ್ನೆಲೆಯಲ್ಲಿ ಪತ್ನಿ ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಇನ್ನು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.