ಮನೆ ರಾಜ್ಯ ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಮಹಿಳೆ ಸಾವು

ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಮಹಿಳೆ ಸಾವು

0

ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಮಹಿಳೆ ಮೃತಪಟ್ಟ ಘಟನೆ ಚಿತ್ರದುರ್ಗ ನಗರದ ಕವಾಡಿಗರಹಟ್ಟಿ ಬಡಾವಣೆಯಲ್ಲಿ ನಡೆದಿದೆ.

Join Our Whatsapp Group

ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಮಂಜುಳಾ(21) ಚಿಕಿತ್ಸೆ ಫಲಿಸದೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 10ಕ್ಕೂ ಹೆಚ್ಚು ಮಕ್ಕಳು ಸೇರಿ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ನಗರಸಭೆಯಿಂದ ಸರಬರಾಜು ಮಾಡುವ ನೀರು ಕಲುಷಿತಗೊಂಡಿದ್ದು ನೀರಿನ ಟ್ಯಾಂಕ್ ತೊಳೆಯುತ್ತಿರಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ನಗರಸಭೆ ಅಧಿಕಾರಿಗಳ ವಿರುದ್ಧ ಕವಾಡಿಗರಹಟ್ಟಿ ನಿವಾಸಿಗಳು ಆಕ್ರೋಶ ಹೊರ ಹಾಕಿದ್ದಾರೆ.