ಮಂಗಳೂರು (ದಕ್ಷಿಣ ಕನ್ನಡ): ಕಾರಲ್ಲಿ ನಿಷೇಧಿತ ಮಾದಕ ವಸ್ತು ಚರಸ್ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರಲ್ಲಿ ಬಂಧಿಸಲಾಗಿದೆ.
ಅಬ್ದುಲ್ ಅಝೀಝ್(34), ಬಂಧಿತ ವ್ಯಕ್ತಿ.
ಈತನಿಂದ 230.4 ಗ್ರಾಂ ತೂಕದ ಚರಸ್ ಹಾಗೂ ಸಾಗಾಟಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ.
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ನಿಂಗ್ ಸ್ಟಾರ್ ಶಾಲೆಯ ಬಳಿ ಆ.1ರಂದು ಮುಂಜಾವ 3:15ರ ಸುಮಾರಿಗೆ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ನಂಬರ್ ಪ್ಲೇಟ್ ಇಲ್ಲದ ಬರುತ್ತಿದ್ದ ಕಾರನ್ನು ಪೊಲೀಸರು ನಿಲ್ಲಿಸುವಂತೆ ಸೂಚಿಸಿದ್ದಾರೆ.
ಈ ವೇಳೆ ಅದರ ಚಾಲಕ ಕಾರನ್ನು ನಿಲ್ಲಿಸದೇ ವೇಗವಾಗಿ ಚಲಾಯಿಸಿದ್ದಾನೆ. ಬಳಿಕ ಕಾರನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲಿಸಿದಾಗ 230.4 ಗ್ರಾಂ ತೂಕದ ನಿಷೇಧಿತ ಮಾದಕ ವಸ್ತು ಚರಸ್ ಪತ್ತೆಯಾಗಿದೆ. ಕಾರು ಹಾಗೂ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರಿನಲ್ಲಿದ್ದ ಇನ್ನಿತರ ಆರೋಪಿತರ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಮಂಗಳೂರು ನಗರದ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಮಾರ್ಗದರ್ಶನದಂತೆ, ಡಿಸಿಪಿ ಅಂಶು ಕುಮಾರ್ ಮತ್ತು ದಿನೇಶ್ ಕುಮಾರ್ ಡಿಸಿಪಿ, ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನಿರ್ದೇಶನದಂತೆ ಬಜ್ಪೆ ಪೊಲೀಸ್ ಠಾಣಾ ಪಿ.ಐ. ಪ್ರಕಾಶ್ ನೇತೃತ್ವದ ತಂಡ ಪಾಲ್ಗೊಂಡಿತ್ತು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.