ಮನೆ ರಾಜ್ಯ ಕಲುಷಿತ ನೀರು ಸೇವಿಸಿ ಮೃತರಾದವರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ: ಸಚಿವ ಡಿ.ಸುಧಾಕರ್

ಕಲುಷಿತ ನೀರು ಸೇವಿಸಿ ಮೃತರಾದವರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ: ಸಚಿವ ಡಿ.ಸುಧಾಕರ್

0

ಚಿತ್ರದುರ್ಗ: ಚಿತ್ರದುರ್ಗ ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಮೃತರಾದವರ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು. ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುವುದು ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

Join Our Whatsapp Group

ನಗರದ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದ ಅವರು ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಧ್ಯರಾತ್ರಿಯಿಂದಲೇ ಕವಾಡಿಗರಹಟ್ಟಿಯಲ್ಲಿ ಕೆಲವು ಜನರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಂತರ ಮುಂಜಾನೆಯಿಂದ ಗ್ರಾಮದ ಬಹು ಜನರಿಗೆ ಆರೋಗ್ಯದಲ್ಲಿ ಸಮಸ್ಯೆ ಕಂಡುಬಂದಿದೆ. 22 ವರ್ಷದ ಓರ್ವ ಮಹಿಳೆ ಮೃತಪಟ್ಟಿದ್ದಾರೆ. ಘಟನೆ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ. ಸಂಪೂರ್ಣ ಮಾಹಿತಿ ಪಡೆದು, ಸರ್ಕಾರ ಮಟ್ಟದಲ್ಲಿ ಚರ್ಚಿಸಿ ಶೀಘ್ರವಾಗಿ ಪರಿಹಾರವನ್ನು‌ ಮೃತರ ಕುಟುಂಬದವರಿಗೆ ನೀಡಲಾಗುವುದು ಎಂದರು.

ಕವಾಡಿಗರಹಟ್ಟಿಯ ಪ್ರತೀ ಮನೆಗೆ ಆರೋಗ್ಯ ಇಲಾಖೆ ವತಿಯಿಂದ ಮಾತ್ರೆ ಹಂಚಿಕೆ ಮಾಡಲಾಗಿದೆ. ಚಿತ್ರದುರ್ಗದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಕುಡಿದು ಈಗಾಗಲೇ 100 ಕ್ಕೂ ಹೆಚ್ಚು ಜನ  ಸೇವಸಿ ವಾಂತಿ ಬೇಧಿಯಿಂದ ಜನ ಅಸ್ವಸ್ಥರಾಗುತ್ತಿದ್ದು ಮೂರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇತ್ತ ಗ್ರಾಮದಲ್ಲಿ ಇನ್ನುಳಿದ ಜನರಿಗೆ ಈ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂದಾಗಿದ್ದು ಗ್ರಾಮದ ಪ್ರತಿ ಮನೆಗೆ ತೆರಳಿದ ಇಲಾಖೆ  ಸಿಬ್ಬಂದಿಗಳು ಓ ಆರ್ ಎಸ್ ಹಾಗೂ ಮಾತ್ರೆಗಳನ್ನು ನೀಡಿ ಜಾಗೃತಿ ವಹಿಸುತ್ತಿದ್ದು ಜನರಲ್ಲಿ ತಿಳಿ ಹೇಳುತ್ತಿದ್ದಾರೆ.

ಅಷ್ಟೆ ಅಲ್ಲದೆ ಈಗಾಗಲೇ ಗ್ರಾಮದಲ್ಲಿ ಸರಬರಾಜು ಮಾಡಿದ ನೀರನ್ನ ಕುಡಿಯದಂತೆ ಹಾಗೂ ಸುತ್ತಮುತ್ತ ಸ್ವಚ್ಛತೆ ಕಾಪಾಡುವಂತೆ ತಿಳಿ ಹೇಳುತ್ತಿದ್ದಾರೆ. ಮಾತ್ರೆ ಮತ್ತು ಓ ಆರ್ ಎಸ್ ಪೌಚ್ ಗಳನ್ನು ನೋಡಿ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಜನರಿಗೆ ತಿಳಿ ಹೇಳಿದ್ದಾರೆ.