ಶಾರುಖ್ ಖಾನ್ ಜೊತೆ ತೆರೆ ಹಂಚಿಕೊಳ್ಳಬೇಕು ಎಂಬುದು ಬಹುತೇಕ ಎಲ್ಲ ನಟಿಯರ ಆಸೆ ಆಗಿರುತ್ತದೆ. ಈಗ ರಶ್ಮಿಕಾ ಮಂದಣ್ಣ ಅವರಿಗೆ ಅಂಥ ಅವಕಾಶ ಸಿಕ್ಕಿದೆ. ಆದರೆ ಇದು ಸಿನಿಮಾದಲ್ಲಿ ಅಲ್ಲ. ಬದಲಿಗೆ, ಜಾಹೀರಾತಿನಲ್ಲಿ ಶಾರುಖ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ಅವರು ಸ್ಕ್ರೀನ್ ಶೇರ್ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ. ಇದು ರಶ್ಮಿಕಾ ಅಭಿಮಾನಿಗಳಿಗೆ ಖುಷಿ ನೀಡಿದೆ.
ಯಶ್ ರಾಜ್ ಸ್ಟುಡಿಯೋದಲ್ಲಿ ಈ ಜಾಹೀರಾತಿನ ಶೂಟಿಂಗ್ ನಡೆದಿದೆ. ರಶ್ಮಿಕಾ ಮಂದಣ್ಣ ಮತ್ತು ಶಾರುಖ್ ಖಾನ್ ಅವರು ಜೊತೆಯಾಗಿ ಇದರಲ್ಲಿ ನಟಿಸಿದ್ದಾರೆ. ಶೀಘ್ರದಲ್ಲೇ ಈ ಜಾಹೀರಾತು ಬಿತ್ತರ ಆಗಲಿದೆ. ಈ ಹಿಂದೆ ರಶ್ಮಿಕಾ ಮಂದಣ್ಣ ಅವರು ವಿಕ್ಕಿ ಕೌಶಲ್ ಜೊತೆ ಒಂದು ಜಾಹೀರಾತಿನಲ್ಲಿ ನಟಿಸಿದ್ದರು. ಅದರ ಕಾನ್ಸೆಪ್ಟ್ ಆಕ್ಷೇಪಾರ್ಹವಾಗಿದೆ ಎಂದು ನೆಟ್ಟಿಗರು ತಕರಾರು ತೆಗೆದಿದ್ದರು. ಈಗ ಶಾರುಖ್ ಜೊತೆ ರಶ್ಮಿಕಾ ನಟಿಸಿದ ಜಾಹೀರಾತು ಹೇಗಿದೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.
ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣ ಭಾರತದಲ್ಲಿ ಮಾತ್ರವಲ್ಲದೇ ಬಾಲಿವುಡ್ ನಲ್ಲೂ ಬೇಡಿಕೆ ಹೆಚ್ಚಾಗಿದೆ. ಈಗಾಗಲೇ ಅವರು ಅಲ್ಲಿನ ಸ್ಟಾರ್ ಹೀರೋಗಳ ಜೊತೆ ತೆರೆ ಹಂಚಿಕೊಂಡಿದ್ದಾರೆ. ಅಮಿತಾಭ್ ಬಚ್ಚನ್ ಜೊತೆ ‘ಗುಡ್ ಬೈ’ ಚಿತ್ರದಲ್ಲಿ ನಟಿಸುವ ಅವಕಾಶ ಅವರಿಗೆ ಸಿಕ್ಕಿತ್ತು. ‘ಮಿಷನ್ ಮಜ್ನು’ ಚಿತ್ರದಲ್ಲಿ ಸಿದ್ದಾರ್ಥ್ ಮಲ್ಹೋತ್ರಾಗೆ ಜೋಡಿಯಾಗಿದ್ದ ರಶ್ಮಿಕಾ ಅವರು, ‘ಅನಿಮಲ್’ ಸಿನಿಮಾದಲ್ಲಿ ರಣಬೀರ್ ಕಪೂರ್ ಜೊತೆ ನಟಿಸಿದ್ದಾರೆ. ಆ ಸಿನಿಮಾ ಡಿಸೆಂಬರ್ 1ರಂದು ಬಿಡುಗಡೆ ಆಗಲಿದೆ.
ಶಾರುಖ್ ಖಾನ್ ನಟನೆಯ ‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ಬಿಡುಗಡೆ ಆಗಲಿದೆ. ಆ ಸಿನಿಮಾ ಮೇಲೆ ಅಭಿಮಾನಿಗಳ ಸಖತ್ ಭರವಸೆ ಇದೆ. ನಯನತಾರಾ, ವಿಜಯ್ ಸೇತುಪತಿ, ದೀಪಿಕಾ ಪಡುಕೋಣೆ ಮುಂತಾದ ಘಟಾನುಘಟಿಗಳು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಪ್ರಿವ್ಯೂ ವಿಡಿಯೋ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ತಮಿಳಿನ ಖ್ಯಾತ ನಿರ್ದೇಶಕ ಅಟ್ಲಿ ಅವರು ‘ಜವಾನ್’ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ‘ರೆಡ್ ಚಿಲ್ಲೀಸ್ ಎಂಟರ್ಟೇನ್ಮೆಂಟ್’ ಮೂಲಕ ಅದ್ದೂರಿಯಾಗಿ ಈ ಸಿನಿಮಾ ನಿರ್ಮಾಣ ಆಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.