ಮನೆ ಅಪರಾಧ ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೆ ಚಾಕು ಇರಿದು ಹತ್ಯೆ

ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೆ ಚಾಕು ಇರಿದು ಹತ್ಯೆ

0

ಮಂಡ್ಯ: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರ ನಡುವೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮಂಡ್ಯ ತಾಲೂಕಿನ ಕೀಲಾರ ಗ್ರಾಮದಲ್ಲಿ ನಡೆದಿದೆ.

ಜಯಂತ್(25) ಕೊಲೆಯಾದ ದುರ್ದೈವಿ.

ಕೀರ್ತೀ(24) ಜಯಂತ್ ನನ್ನು ಕೊಂದ ಸ್ನೇಹಿತ.

ಸ್ನೇಹಿತರಿಬ್ಬರು ಸ್ನೇಹಿತರದಿನದಂದು ತಮ್ಮ ಅಂಗಡಿಯಲ್ಲಿ ಎಣ್ಣೆ ಪಾರ್ಟಿ ಮಾಡಿದ್ದಾರೆ. ಬಳಿಕ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿದ್ದು, ಕೀರ್ತಿ ಸ್ನೇಹಿತ ಜಯಂತ್ ಗೆ ಚಾಕು ಇರಿದಿದ್ದಾನೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ. ಇರಿತದಿಂದ ಗಂಭೀರವಾಗಿ ಗಾಯಗೊಂಡ ಜಯಂತ್ ಸ್ಥಳದಲ್ಲೇ ಅಸುನೀಗಿದ್ದಾನೆ.

ಕೆರೆಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಡ್ಯ ಮಿಮ್ಸ್ ಶವಗಾರಕ್ಕೆ ಮೃತ ದೇಹ ರವಾನೆ ಮಾಡಲಾಗಿದ್ದು, ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.