ಮಂಗಳೂರು(Mangalore) (ದಕ್ಷಿಣ ಕನ್ನಡ): ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರನ್ನು ವಜಾ ಮಾಡುವುದು ಮಾತ್ರವಲ್ಲ, ಕೊಲೆ ಆರೋಪದಡಿ ಜೈಲಿಗೆ ಕಳಿಸಬೇಕು ಎಂದು ಮಾಜಿ ಸಚಿವ ಬಿ ರಮಾನಾಥ ರೈ ಆಗ್ರಹಿಸಿದ್ದಾರೆ.
ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಶೇ.40 ರಷ್ಟು ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಡೆತ್ ನೋಟ್ನಲ್ಲಿ ಈಶ್ವರಪ್ಪ ಅವರ ಹೆಸರನ್ನು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವವರು ಡೆತ್ ನೋಟ್ನಲ್ಲಿ ಸುಳ್ಳು ಹೇಳುವುದಿಲ್ಲ. ಈಶ್ವರಪ್ಪ ವಿರುದ್ಧ ಎಫ್ಐಆರ್ ಆಗಿದ್ದು, ಕೂಡಲೇ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.