ಮನೆ ರಾಜ್ಯ ಮೈಸೂರು ಅರಮನೆ ಹೊರಾಂಗಣದಲ್ಲಿ ಡ್ರೋನ್ ಕ್ಯಾಮರಾ ಬಳಕೆಗೆ ನಿರ್ಬಂಧ

ಮೈಸೂರು ಅರಮನೆ ಹೊರಾಂಗಣದಲ್ಲಿ ಡ್ರೋನ್ ಕ್ಯಾಮರಾ ಬಳಕೆಗೆ ನಿರ್ಬಂಧ

0

ಮೈಸೂರು: ನಾಡಹಬ್ಬ ದಸರಾ ಮಹೋತ್ಸವವನ್ನ ಅದ್ಧೂರಿಯಾಗಿ ಆಚರಣೆ ಮಾಡುವುದಕ್ಕೆ ರಾಜ್ಯ ಸರ್ಕಾರ ಈಗಿನಿಂದಲೇ ಸಿದ್ಧವಾಗುತ್ತಿದೆ. ಇದಕ್ಕಾಗಿ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ಕೂಡ ನಡೆಸಿದ್ದಾರೆ.

ಸದ್ಯ ಇದರೆ ಮಧ್ಯೆ ಮೈಸೂರು ಅರಮನೆಯ ಹೊರಾಂಗಣದಲ್ಲಿ ಡ್ರೋನ್​ ಕ್ಯಾಮೆರಾ ಬಳಕೆಗೆ ನಿರ್ಬಂಧ ಹೇರಿ ಅರಮನೆ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಈ ಬಗ್ಗೆ‌ ಅರಮನೆ ಮಂಡಳಿ ಉಪ ನಿರ್ದೇಶಕ ಟಿಎಸ್ ಸುಬ್ರಮಣ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರು ಅರಮನೆಯೂ ವಿಶ್ವ ವಿಖ್ಯಾತಿಯನ್ನು ಹೊಂದಿದ್ದು, ಅರಮನೆಯ ಸುತ್ತಮುತ್ತಲ ಪ್ರದೇಶವನ್ನು ‘ಹಳದಿ ವಲಯ’ ವೆಂದು ಘೋಷಿಸಲಾಗಿದೆ. ಆದ್ದರಿಂದ ಅರಮನೆಯ ಹೊರಾಂಗಣದಲ್ಲಿ ಡ್ರೋನ್​ ಕ್ಯಾಮೆರಾ ಬಳಸುವುದನ್ನು ನಿರ್ಬಂಧಿಸಲಾಗಿದೆ.