ಚಾಮರಾಜನಗರ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲೆಯ ದಲಿತ ಸಮುದಾಯವು ನಾಲ್ಕು ವರ್ಷಗಳ ಕಾಲ ತಮ್ಮದೇ ಸಮುದಾಯಕ್ಕೆ ಸೇರಿದ ಎರಡು ಕುಟುಂಬಗಳಿಗೆ ಬಹಿಷ್ಕಾರ ವಿಧಿಸಿದೆ.
ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ ಬಹಿಷ್ಕಾರಕ್ಕೊಳಗಾದ ಕುಟುಂಬಗಳ ಸದಸ್ಯರು ದಲಿತರ ಕಾಲೋನಿಯಲ್ಲಿರುವ ಮನೆಗಳಲ್ಲಿ ಊಟ ಮಾಡುವಂತಿಲ್ಲ ಮತ್ತು ಅಂಗಡಿಗಳಿಗೆ ತೆರಳುವಂತಿಲ್ಲ. ಸಮುದಾಯದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಕುಟುಂಬದ ಸದಸ್ಯರನ್ನು ಆಹ್ವಾನಿಸಲಾಗುವುದಿಲ್ಲ ಅಥವಾ ಭಾಗವಹಿಸಲು ಅನುಮತಿಸುವುದಿಲ್ಲ. ಈ ಕುಟುಂಬಗಳ ಮಕ್ಕಳೂ ಕಾಲೋನಿಯ ಇತರ ಮಕ್ಕಳೊಂದಿಗೆ ಆಟವಾಡುವಂತಿಲ್ಲ ಎಂದು ಹೇಳಲಾಗಿದೆ.
ದಲಿತ ಸಮುದಾಯದ ಹಿರಿಯರಾದ ಯಜಮಾನ್ ಚನ್ನಂಜಯ್ಯ, ನಿವೃತ್ತ ಶಿಕ್ಷಕ ಮತ್ತು ನಗರ ಪಾಲಿಕೆಯಲ್ಲಿ ನೀರು ಸರಬರಾಜು ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿರುವ ಮಹದೇವಯ್ಯ ಅವರು ಬಹಿಷ್ಕಾರದ ಆದೇಶವನ್ನು ನೀಡಿದ್ದಾರೆ. ಬಹಿಷ್ಕಾರದ ಆದೇಶವನ್ನು ಪಂಚಾಯಿತಿ ನಡೆಸುವ ಸಮಯದಲ್ಲಿ ನೀಡಲಾಗಿದೆ.
ಬಹಿಷ್ಕಾರಕ್ಕೊಳಗಾಗಿರುವ ರಾಮಸಮುದ್ರ ವಾರ್ಡ್ ನ ಎರಡು ಕುಟುಂಬಗಳು, ತಮಗೆ ಮಾನಸಿಕ ಹಿಂಸೆ ಮತ್ತು ಅವಮಾನ ಮಾಡಲಾಗುತ್ತಿದೆ. ಯಾರೊಬ್ಬರೂ ತಮಗೆ ನ್ಯಾಯ ನೀಡುತ್ತಿಲ್ಲ. ಜಿಲ್ಲಾಧಿಕಾರಿ ಮಧ್ಯ ಪ್ರವೇಶಿಸಿ ತಮ್ಮ ಕುಟುಂಬದವರ ಮೇಲಿನ ಬಹಿಷ್ಕಾರವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.
ಸಂತ್ರಸ್ತರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಇದರೊಂದಿಗೆ ತಹಸೀಲ್ದಾರ್, ಸಮಾಜ ಕಲ್ಯಾಣ ಇಲಾಖೆ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.