ಮನೆ ಮನರಂಜನೆ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್

‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್

0

ರಕ್ಷಿತ್ ಶೆಟ್ಟಿ ನಾಯಕರಾಗಿ ನಟಿಸಿ, ನಿರ್ಮಾಣ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ.

ಚರಣ್ ರಾಜ್ ಸಂಗೀತ ಸಂಯೋಜಿಸಿರುವ ಹಾಗೂ ಧನಂಜಯ್ ರಂಜನ್ ಬರೆದಿರುವ ಶೀರ್ಷಿಕೆ ಗೀತೆಯನ್ನು ಕಪಿಲ್ ಕಪಿಲನ್ ಸೊಗಸಾಗಿ ಹಾಡಿದ್ದಾರೆ. ಹಾಡು ಬಿಡುಗಡೆಯಾದ ಕ್ಷಣದಿಂದಲೇ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಚಿತ್ರ ಬಿಡುಗಡೆಗೆ ರಕ್ಷಿತ್ ಶೆಟ್ಟಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಹೇಮಂತ್ ಎಂ.ರಾವ್ ನಿರ್ದೇಶಿಸಿದ್ದಾರೆ. ರುಕ್ಮಿಣಿ ವಸಂತ್, ಚೈತ್ರ ಜೆ.ಆಚಾರ್, ಅವಿನಾಶ್, ಶರತ್ ಲೋಹಿತಾಶ್ವ, ಅಚ್ಯುತ ಕುಮಾರ್​​, ಪವಿತ್ರ ಲೋಕೇಶ್, ರಮೇಶ್ ಇಂದಿರಾ, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ತಾರಾಗಣದಲ್ಲಿದ್ದಾರೆ.

ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಹಾಗೂ ಸುನೀಲ್ ಭಾರದ್ವಾಜ್ ಸಂಕಲನ ಚಿತ್ರಕ್ಕಿದೆ. ಚಿತ್ರದ ಭಾಗ 1 ಸೆಪ್ಟೆಂಬರ್ 1ರಂದು ಬಿಡುಗಡೆಯಾಗಲಿದ್ದು, ಭಾಗ 2 ಅಕ್ಟೋಬರ್ 20ಕ್ಕೆ ತೆರೆ ಕಾಣಲಿದೆ.