ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ಮಾಡಿ ಮಾದಕ ವಸ್ತು ಹೊಂದಿದ ಆರೋಪಿಯನ್ನು ಬಂಧಿಸಿದ್ದಾರೆ.
ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಕೆ ಸಿ ರೋಡ್ ಪರಿಸರದಲ್ಲಿ ಮಾದಕ ವಸ್ತುವಾದ ಎಂಡಿಎಂಎ ಅನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ ಉಪ್ಪಳದ ಮೊಹಮ್ಮದ್ ರಫೀಕ್ ಬಿ ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ಒಟ್ಟು 50 ಗ್ರಾಂ ತೂಕದ 2,50,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ನಗದು 8,000 ಮೊಬೈಲ್-1, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಸ್ವತ್ತುಗಳ ಒಟ್ಟು ಮೌಲ್ಯ 2,68,500 ರೂಪಾಯಿ ಆಗಬಹುದು. ಆರೋಪಿಯ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.
ಈ ಮಾದಕ ವಸ್ತು ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ ಐಯವರಾದ ರಾಜೇಂದ್ರ ಬಿ, ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.
‘ಡ್ರಗ್ಸ್ ಫ್ರಿ ಮಂಗಳೂರು’ ಮಾಡುವ ನಿಟ್ಟಿನಲ್ಲಿ ಮಂಗಳೂರು ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುವ ವ್ಯಕ್ತಿಗಳನ್ನು ಪತ್ತೆ ಹಚ್ಚುವ ಸಲುವಾಗಿ ಮಾದಕ ವಸ್ತು ಮಾರಾಟ ಮಾಡುವವರ ಮಾಹಿತಿಯನ್ನು ಪೊಲೀಸ್ ಇಲಾಖೆಗೆ ಒದಗಿಸುವಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.