ಮನೆ ರಾಜ್ಯ ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣ: ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಸಿಐಡಿ ಎಡಿಜಿಪಿ

ಉಡುಪಿ ವಿಡಿಯೋ ಚಿತ್ರೀಕರಣ ಪ್ರಕರಣ: ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಸಿಐಡಿ ಎಡಿಜಿಪಿ

0

ಉಡುಪಿ: ಇಲ್ಲಿನ ಖಾಸಗಿ ಪ್ಯಾರ ಮೆಡಿಕಲ್ ವೀಡಿಯೋ ಚಿತ್ರೀಕರಣ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಎಡಿಜಿಪಿ ಮನೀಷ್ ಕರ್ಬೀಕರ್ ಗುರುವಾರ ಉಡುಪಿಗೆ ಆಗಮಿಸಿ ಬನ್ನಂಜೆ ಸರಕಾರಿ ಅತಿಥಿ ಗೃಹದಲ್ಲಿ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.

ಸಿಐಡಿ ಎಸ್ ಪಿ ರಾಘವೇಂದ್ರ ‌ಹೆಗಡೆ, ಉಡುಪಿ ಎಸ್ ಪಿ ಅಕ್ಷಯ್ ಮಚ್ಚೀಂದ್ರ ಹಾಕೆ, ಸಿಐಡಿ ಅಧಿಕಾರಿಗಳು, ಜಿಲ್ಲಾ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಮಹತ್ವದ ಚರ್ಚೆ ನಡೆಸಿದರು.

ಎಡಿಜಿಪಿ ಅವರು ಅಧಿಕಾರಿಗಳಿಂದ ತನಿಖೆಯ ವಿವರಗಳನ್ನು ಪಡೆದುಕೊಂಡು ಸಲಹೆ, ಸೂಚನೆಗಳನ್ನು ನೀಡಿದರು.‌

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿ ತನಿಖೆ ಪ್ರಗತಿಯಲ್ಲಿದ್ದು, ಎಫ್ ಎಸ್ ಎಲ್ ವರದಿಗೆ ಕಾಯುತ್ತಿದ್ದೇವೆ. ತನಿಖೆ ಪೂರ್ಣಗೊಂಡ ಬಳಿಕ ಚಾರ್ಜ್ ಶೀಟ್ ಸಲ್ಲಿಕೆ ಮಾಡುತ್ತೇವೆ ಎಂದು ತಿಳಿಸಿದರು.

ನಂತರ ವಿಡಿಯೋ ಚಿತ್ರೀಕರಣ ಘಟನೆ ನಡೆದ ಖಾಸಗಿ ಪ್ಯಾರ ಮೆಡಿಕಲ್ ಕಾಲೇಜಿಗೆ ಭೇಟಿ ನೀಡಿದರು.