ಮನೆ ರಾಷ್ಟ್ರೀಯ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಗಳ ಮೇಲೆ ಹರಿದ ಲಾರಿ: ನಾಲ್ವರ ಸಾವು

ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಗಳ ಮೇಲೆ ಹರಿದ ಲಾರಿ: ನಾಲ್ವರ ಸಾವು

0

ಚೆಂಗಲ್ಪಟ್ಟು (ತಮಿಳುನಾಡು): ಲಾರಿಯೊಂದು ನಿಯಂತ್ರಣ ತಪ್ಪಿ ಮೂರು ದ್ವಿ ಚಕ್ರವಾಹನಗಳ ಮೇಲೆ ಹರಿದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ತಮಿಳುನಾಡು ಚೆಂಗಲ್ಪಟ್ಟುವಿನ ಪೊತ್ತೇರಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬೆಳಗ್ಗೆ 9ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬರುತ್ತಿದ್ದ ಟ್ಟಿಪ್ಪರ್​ ನಿಯಂತ್ರಣ ತಪ್ಪಿದೆ. ಇದರಿಂದ ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ಚಲಿಸಿದ್ದು, ಈ ವೇಳೆ, ಮೂರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೈಕಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಸ್ತೆ ಮಧ್ಯದ ತಡೆಗೋಡೆಗೆ ಡಿಕ್ಕಿಯಾಗಿ ಲಾರಿ ನಿಂತಿದೆ. ಇದರಿಂದ ಸ್ವಲ್ಪ ಸಮಯದವರೆಗೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.ಅಪಘಾತದ ಬಗ್ಗೆ ಮಾಹಿತಿ ಪಡೆದ ಗುಡುವಂಚೇರಿ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತರ ದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಚೆಂಗಲಪಟ್ಟು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಅಲ್ಲದೇ ಅಪಘಾತದಲ್ಲಿ ಸಾವನ್ನಪ್ಪಿದವರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.