ಮಂಗಳೂರು: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಆ.27 ರಂದು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಶಾಸಕರಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಈ ಬಗ್ಗೆ ಮಾಹಿತಿ ನೀಡಿದ ಅವರು, ಪ್ರತಿಭಟನೆ ಬಳಿಕ ಮರುದಿನ ಮುಖ್ಯಮಂತ್ರಿ ಹಾಗೂ ರಾಜ್ಯಪಾಲರಿಗೆ ಮನವಿ ನೀಡಲಾಗುವುದು. ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಲಾಗುವುದು ಎಂದರು.