ಮನೆ ಮನರಂಜನೆ ನಟ, ನಿರ್ದೇಶಕ ಉಪೇಂದ್ರ ವಿರುದ್ಧ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ನಟ, ನಿರ್ದೇಶಕ ಉಪೇಂದ್ರ ವಿರುದ್ಧ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

0

ಮಂಡ್ಯ: ಸಾಮಾಜಿಕ ಜಾಲತಾಣದಲ್ಲಿ ಪರಿಶಿಷ್ಟ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ನಟ ಉಪೇಂದ್ರ ವಿರುದ್ಧ ಮದ್ದೂರು ತಾಲೂಕು ದಲಿತ ಸಂಘಟನೆಗಳ ಒಕ್ಕೂಟದಿಂದ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿವೆ.

ಸಾಮಾಜಿಕ ಜಾಲತಾಣದಲ್ಲಿ ನಟ ಉಪೇಂದ್ರ ಮಾತನಾಡುತ್ತಾ, ಊರು ಎಂದ ಮೇಲೆ ಹೊಲಗೇರಿ ಇರುತ್ತದೆ ಎಂಬ ಹೇಳಿಕೆ ನೀಡಿದ್ದರು.

ಇಂತಹ ಹೇಳಿಕೆ ದಲಿತ ಸಮಾಜದ ಜಾತಿ ಭಾವನೆಗಳಿಗೆ ಘಾಸಿ ಉಂಟು ಮಾಡಿದೆ. ಆದ್ದರಿಂದ ಉಪೇಂದ್ರ ವಿರುದ್ಧ ದೌರ್ಜನ್ಯ ಕಾಯ್ದೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ದಲಿತ ಸಂಘಟನೆಗಳು ಆಗ್ರಹಿಸಿವೆ.