ಮೈಸೂರು: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (SFI), ಮೈಸೂರು ಜಿಲ್ಲಾ ಸಮಿತಿ ವತಿಯಿಂದ ಇಂದು ಮೈಸೂರು ವಿಶ್ವ ವಿದ್ಯಾನಿಲಯ ಎದುರು ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಡಿಜಿಟಲ್ ಅಂಕಪಟ್ಟಿ ಬದಲು ಮುದ್ರಿತ ಅಂಕ ಪಟ್ಟಿ ನೀಡಬೇಕು. ವಿಶ್ವ ವಿದ್ಯಾನಿಲಯದ ಹಾಸ್ಟೆಲ್ ಗಳಲ್ಲಿ ಮೂಲಭೂತ ಸೌಕರ್ಯಗಳನ್ನು, ಗುಣಮಟ್ಟದ ಆಹಾರ ಒದಗಿಸಬೇಕು. ವಿದ್ಯಾರ್ಥಿಗಳಿಗೆ ಮಹಾರಾಜ ಕಾಲೇಜಿನ ಕ್ರಿಮಿನೊಲೊಜಿ ಅಂಡ್ ಫೋರೆನ್ಸಿಕ್ ಸೈನ್ಸ್ ಅಂತಿಮ ವರ್ಷದ ವಿದ್ಯಾರ್ಥಿಗಳ 2ನೇ ಸೆಮಿಸ್ಟರ್ ಫಲಿತಾಂಶ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಅಧ್ಯಕ್ಷರಾದ ವಿಜಯ್ ಕುಮಾರ್, ಜಿಲ್ಲಾ ಸಮಿತಿ ಸದಸ್ಯರಾದ ಕವನ, ವಿದ್ಯಾರ್ಥಿ ಮುಖಂಡರಾದ ಮನು,ಕಾವ್ಯ, ಪೂಜಾ, ಶಿಬಿನ್, ರೆಹಮನ್, ಮತ್ತು ಹಲವಾರು ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.