ಮನೆ ಉದ್ಯೋಗ ಹೆಚ್ ​ಎಎಲ್ ​ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹೆಚ್ ​ಎಎಲ್ ​ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​ ನ ಖಾಲಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಡಯಾಲಿಸಿಸ್ ಟೆಕ್ನಿಷಿಯನ್ ಪೋಸ್ಟ್‌ ಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರಗಳು:

ಸಂಸ್ಥೆಯ ಹೆಸರು : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ( HAL )

ಹುದ್ದೆಗಳ ಸಂಖ್ಯೆ: 2

ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ

ಹುದ್ದೆಯ ಹೆಸರು: ಡಯಾಲಿಸಿಸ್ ಟೆಕ್ನಿಷಿಯನ್

ಶೈಕ್ಷಣಿಕ ಅರ್ಹತೆ:

HALನ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಮಾನ್ಯತೆ ಪಡೆದ ಯಾವುದೇ ಬೋರ್ಡ್‌ ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತರಗತಿ, ಡಿಪ್ಲೊಮಾ ಮತ್ತು ಡಯಾಲಿಸಿಸ್ ಟೆಕ್ನಿಷಿಯನ್​ನಲ್ಲಿ ಪದವಿಯನ್ನು ಹೊಂದಿರಬೇಕು.

ವಯೋಮಿತಿ:

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-ಆಗಸ್ಟ್-2023 ರಂತೆ 40 ವರ್ಷಗಳಿಗಿಂತ ಕಡಿಮೆಯಿರಬೇಕು.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಕಳುಹಿಸಬೇಕಾದ ವಿಳಾಸ:

Chief Manager (HR), Industrial Health Centre, Hindustan Aeronautics Limited (Bangalore Complex), Suranjandas Road, Bangalore-560017

ಅರ್ಜಿ ನಮೂನೆ ಸಿಗುವುದು ಎಲ್ಲಿ?

ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಡೌನ್​ ಲೋಡ್ ಮಾಡಿಕೊಳ್ಳಬಹುದು.

ಪ್ರಮುಖ ದಿನಾಂಕ:

ಆಫ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26-ಆಗಸ್ಟ್-2023

ಅಧಿಕೃತ ವೆಬ್‌ ಸೈಟ್: hal-india.co.in