ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿದ್ದಾರೆ. ಶುಕ್ರವಾರ ಶಿವಮೊಗ್ಗದಿಂದ ಬೆಂಗಳೂರಿಗೆ ರ‍್ಯಾಲಿ ಮೂಲಕ ಆಗಮಿಸಿದ್ದ ಕೆ.ಎಸ್ ಈಶ್ವರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಕೆ.ಎಸ್ ಈಶ್ವರಪ್ಪ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲರುಈಶ್ವರಪ್ಪ ರಾಜೀನಾಮೆ ಪತ್ರ ಆಧರಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಕಳುಹಿಸಿಕೊಟ್ಟಿದ್ದ ಸಿಎಂ ಬೊಮ್ಮಾಯಿ, ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದರು. ಸಿಎಂ ಬೊಮ್ಮಾಯಿ ಪತ್ರವನ್ನು ಪರಿಗಣಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು ರಾಜ್ಯಪಾಲ ಗೆಹ್ಲೋಟ್ ಆದೇಶ ಹೊರಡಿಸಿದ್ದಾರೆ.