ಮನೆ ರಾಜ್ಯ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಪ್ರಕರಣ:  ಮತ್ತೊಂದು ಮಗು ಸಾವು

ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಪ್ರಕರಣ:  ಮತ್ತೊಂದು ಮಗು ಸಾವು

0

ರಾಮನಗರ: ಟ್ಯೂಷನ್ ಮುಗಿಸಿ ಮನೆಗೆ ಹೋಗುತ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮತ್ತೋರ್ವ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಮೃತ ಬಾಲಕನನ್ನು ಸುಚಿತ್ (10) ಎನ್ನಲಾಗಿದೆ.

ಕಳೆದ ವಾರ ರಾಮನಗರ ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಟ್ಯೂಷಮ್ ಮುಗಿಸಿ ಮನೆಗೆ ಹೋಗುತ್ತಿದ್ದ ಐವರು ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದಿತ್ತು ಈ ವೇಳೆ ಇಬ್ಬರು ಮಕ್ಕಳು ಅಪಘಾತದ ದಿನದಂದೇ ಮೃತಪಟ್ಟಿದ್ದರು, ಗಂಭೀರ ಗಾಯಗೊಂಡಿದ್ದ ಮೂವರು ಆಸ್ಪತ್ರೆಗೆ ದಾಖಲಿಸಲಾಗಿತ್ತು ಇದೀಗ ಮೂವರಲ್ಲಿ ಓರ್ವ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ.

ಮಗುವನ್ನು ಕಳೆದುಕೊಂಡ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ. ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.