ಬೆಂಗಳೂರು: ಬಿಜೆಪಿ ಸಿದ್ಧಾಂತ, ನಾಯಕರನ್ನು ನಂಬಿಯೇ ಪಕ್ಷ ಸೇರ್ಪಡೆಯಾಗಿದ್ದೇನೆ. ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವ ಪ್ರಮೇಯವೇ ಇಲ್ಲ ಎಂದು ಶಾಸಕ ಕೆ.ಗೋಪಾಲಯ್ಯ ಹೇಳಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ಗೋಪಾಲಯ್ಯ ಅವರು ಬಿಜೆಪಿ ಬಿಟ್ಟು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳು ಕೇಳಿಬರುತ್ತಿದ್ದವು. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಗೋಪಾಲಯ್ಯ ಅವರು, ನಾನು ಕನಸಿನಲ್ಲೂ ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಯೋಚನೆಯಾಗಿಲ್ಲ. ಮಾಧ್ಯಮಗಳಲ್ಲಿ ನನ್ನ ಬಗ್ಗೆ ಇಂತಹ ಹುಸಿ ಸುದ್ದಿ ಏಕೆ ಬರುತ್ತವೆಯೋ ಗೊತ್ತಿಲ್ಲ. ನಾನಂತೂ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ಕಾರ್ಯಕರ್ತರು ಹಾಗೂ ಮುಖಂಡರು ಗೊಂದಲಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದರು.
ಬಿಜೆಪಿಯನ್ನು ನಂಬಿ ಸೇರ್ಪಡೆಯಾಗಿದ್ದೆ. ಉಪಚುನಾವಣೆ ಹಾಗೂ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದ ಮತದಾರರು ನನಗೆ ಹೆಚ್ಚಿನ ಬಹುಮತ ನೀಡಿ ನನ್ನನ್ನು ಆಯ್ಕೆ ಮಾಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದೇನೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಪರಿಸ್ಥಿತಿ ನನಗೆ ಬಂದಿಲ್ಲ. ಸುಖಾ ಸುಮ್ಮನೆ ಗೊಂದಲ ಸೃಷ್ಟಿಸುವ ಕೆಲಸವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.