ಉಡುಪಿ(Udupi): ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದಲ್ಲಿ ಭಕ್ತರಿಕೆ ನೀಡುವ ಭೋಜನ ಪ್ರಸಾವು ರಾಷ್ಟ್ರೀಯ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಪ್ರಮಾಣಪತ್ರ ಪಡೆದುಕೊಂಡಿದೆ.
ಈ ದೇವಾಲಯಕ್ಕೆ ನಿತ್ಯವೂ ಸಾವಿರಾರೂ ಸಂಖ್ಯೆಯಲ್ಲಿ ರಾಜ್ಯ-ಹೊರ ರಾಜ್ಯ ಮಾತ್ರವಲ್ಲದೇ ವಿದೇಶದಿಂದಲೂ ಭಕ್ತರೂ ಆಗಮಿಸುತ್ತಿದ್ದು, ಅವರಿಗೆ ದೇವಾಲಯದ ವತಿಯಿಂತ ಉಚಿತ ಭೋಜನ ಪ್ರಸಾದದ ವ್ಯವಸ್ಥೆ ಇದೆ.
ಈ ಭೋಜನ ಪ್ರಸಾದ ಹಾಗೂ ದೇವರಿಗೆ ಅರ್ಪಿಸುವ ನೈವೇದ್ಯಗಳು ಗರಿಷ್ಟ ಗುಣಮಟ್ಟದಿಂದ ಕೂಡಿದ್ದು, ಆರೋಗ್ಯಕ್ಕೆ ಅತ್ಯಂತ ಸುರಕ್ಷಿತವಾಗಿದೆ ಎಂದು ಪ್ರಾಧಿಕಾರವು ಪ್ರಮಾಣಪತ್ರವನ್ನು ನೀಡಿದೆ.
ಈ ಭೋಜನಾ ತಯಾರಿಸುವ ಅಡುಗೆ ಮನೆ, ಅಲ್ಲಿರುವ ಸೌಲಭಯಗಳು, ಆಹಾರ ತಯಾರಿಸುವ ವಿಧಾನ, ಈ ಸಂದರ್ಭದಲ್ಲಿ ಪಾಲಿಸುವ ಸ್ವಚ್ಛತೆ, ಆಹಾರ ತಯಾರಿಕಾ ಸಿಬ್ಬಂದಿಗೆ ನೀಡಿರುವ ತರಬೇತಿ ಇತ್ಯಾದಿ ಅಂಶಗಳನ್ನು ಆಧರಿಸಿ ಇತ್ತೀಚೆಗೆ ಪ್ರಾಧಿಕಾರವು ಪರಿಶೋಧನೆ ಮಾಡಿತ್ತು.
ಆಹಾರ ತಯಾರಿಕಾ ಕೊಠಡಿಯು ಅತ್ಯಂತ ಸುಸಜ್ಜಿತವಾಗಿದ್ದು, ಸೋರುವಿಕೆ ಇಲ್ಲದ, ಉತ್ತಮ ಗುಣಮಟ್ಟದ ಗೋಡೆ, ಕಾಲು ಜಾರದಂತಹ ನೆಲಹಾಸು, ತುಕ್ಕು ಹಿಡಿಯದ ಕಿಟಕಿ ಬಾಗಿಲುಗಳು, ಆಹಾರ ತಯಾರಿಸುವ ಪಾತ್ರೆಗಳಿಗೆ ಕಲಾಯಿ ಹಾಕಿರುವುದು ಉತ್ತಮ ಗಾಳಿ ಬೆಳೆಕು ಸೌಲಭ್ಯ, ಆಹಾರವನ್ನು ಬಿಸಿ-ತಂಪು ಮಾಡುವ ಯಂತ್ರೋಪಕರಣಗಳು ಆಹಾರ ತಯಾರಿಕಾ ಸಾಮಾಗ್ರಿಗಳ ದಾಸ್ತಾನು ಕೊಠಡಿ, ಪಾತ್ರೆ ತೊಳೆಯುವ ನೀರು, ತ್ಯಾಜ್ಯ ವಿಲೇವಾರಿ ಇತ್ಯಾದಿಗಳ ಗುಣಮಟ್ಟವನ್ನು ಪರೀಕ್ಷಿಸಿದೆ. ಆಹಾರ ಸುರಕ್ಷತಾ ಪ್ರಮಾಣಪತ್ರ ಹೊಂದಿರುವ ಸರಬರಾಜುದಾರರ ಮೂಲಕವೇ ಖರೀದಿ, ಅವಧಿ ಮೀರುವ ಮೊದಲೇ ಆಹಾರ ಪದಾರ್ಥಗಳ ಬಳಕೆ, ಅವುಗಳನ್ನು ಕೆಡದಂತೆ ಇಡುವ ಸೂಕ್ತ ವ್ಯವಸ್ಥೆ, ಭೋಜನ ಶಾಲೆಯಲ್ಲಿ ಸ್ವಚ್ಛತೆಗೆ ಆದ್ಯತೆ, ಶುದ್ಧೀಕರಣ ಇತ್ಯಾದಿಗಳನ್ನು ಕೂಡ ಪ್ರಾಧಿಕಾರ ಗಮನಿಸಿದೆ.
ಕೊಲ್ಲೂರು ದೇವಸ್ಥಾನದ ಜೊತೆಗೆ, ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ, ದ.ಕ. ಜಿಲ್ಲೆಯ ಧರ್ಮಸ್ಥಳ ಮತ್ತು ಉತ್ತರ ಕನ್ನಡ ಜಿಲ್ಲೆಯ ಮಾರಿಕಾಂಬಾ ದೇವಸ್ಥಾನ, ಶಿರಸಿ ಮುಂತಾದ ಪ್ರಸಿದ್ಧ ದೇವಾಲಯಗಳನ್ನು ಕೂಡ ಭೋಗ್ ಅಡಿಯಲ್ಲಿ ಆಯ್ಕೆ ಮಾಡಲಾಗಿದೆ.