ಡಬ್ಲಿನ್ ನಲ್ಲಿ ಭಾನುವಾರ ನಡೆದ ಐರ್ಲೆಂಡ್ ವಿರುದ್ಧದ ಎರಡನೇ ಟಿ-20ಐ ಪಂದ್ಯದಲ್ಲಿ ಭಾರತ 33 ರನ್ ಗಳಿಂದ ಗೆದ್ದು ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ತನ್ನದಾಗಿಸಿಕೊಂಡಿದ್ದಾರೆ.
ಮೊದಲು ಬ್ಯಾಟಿಂಗ್ ಮಾಡಿದ ಇಂಡಿಯಾಗೆ ಯಶಸ್ವಿ ಜೈಸ್ವಾಲ್ ಹಾಗೂ ರುತುರಾಜ್ ಗಾಯಕ್ವಾಡ್ ಉತ್ತಮ ಆರಂಭ ಒದಗಿಸಿದರು.
ಮೊದಲ ವಿಕೆಟ್ ಗೆ 29 ರನ್ ಪೇರಿಸಿದ ಬಳಿಕ ಜೈಸ್ವಾಲ್ (18) ಔಟಾದರು. ಆ ಬಳಿಕ ಬಂದ ತಿಲಕ್ ವರ್ಮಾ ಕೇವಲ 1 ರನ್ ಗಳಿಸಿ ನಿರಾಸೆ ಮೂಡಿಸಿದರು. ಇನ್ನು 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ 26 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 40 ರನ್ ಭರಿಸಿದರು .
ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ರುತುರಾಜ್ ಗಾಯಕ್ವಾಡ್ 43 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್ ಗಳೊಂದಿಗೆ 58 ರನ್ ಬಾರಿಸಿದರು. ಅಂತಿಮ ಹಂತದಲ್ಲಿ ಅಬ್ಬರಿಸಿದ ರಿಂಕು ಸಿಂಗ್ 21 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 38 ರನ್ ಚಚ್ಚಿದರೆ, ಶಿವಂ ದುಬೆ 16 ಎಸೆತಗಳಲ್ಲಿ ಅಜೇಯ 22 ರನ್ ಬಾರಿಸಿದರು. ಟೀಮ್ ಇಂಡಿಯಾ ಮೊತ್ತ 5 ವಿಕೆಟ್ ನಷ್ಟಕ್ಕೆ 185 ಕ್ಕೆ ಬಂದು ನಿಂತಿತು.
186 ರನ್ ಗಳ ಗುರಿ ಪಡೆದ ಐರ್ಲೆಂಡ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. 28 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಈ ಹಂತದಲ್ಲಿ ಆಂಡ್ರ್ಯೂ ಬಾಲ್ಬಿರ್ನಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಬಾಲ್ಬಿರ್ನಿ 51 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 5 ಫೋರ್ ಗಳೊಂದಿಗೆ 72 ರನ್ ಭಾರಿಸಿದರು . ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ನೀಡಲಿಲ್ಲ . ಇನ್ನು ಕೊನೆಯ ಹಂತದಲ್ಲಿ ಮಾರ್ಕ್ ಅಡೈರ್ 23 ರನ್ ಗಳನ್ನು ಬಾರಿಸಿದರು. 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 152 ರನ್ ಗಳಿಸಲಷ್ಟೇ ಶಕ್ತರಾದರು.
ಈ ಮೂಲಕ 33 ರನ್ ಗಳಿಂದ. 33 ರನ್ ಗಳಿಂದ ಗೆದ್ದು ಮೂರು ಪಂದ್ಯಗಳ ಸರಣಿಯನ್ನು 2-0 ಅಂತರದಿಂದ ತನ್ನದಾಗಿಸಿಕೊಂಡಿದ್ದಾರೆ.
ಭಾರತದ ಪರ ಬುಮ್ರಾ 2ವಿಕೆಟ್. ಪ್ರಸಿದ್ಧ್ ಕೃಷ್ಣ ಮತ್ತು ರವಿ ಬಿಷ್ಣೋಯ್ ಎರಡು ವಿಕೆಟ್ ಪಡೆದರೆ, ಅರ್ಷದೀಪ್ ಸಿಂಗ್ ಒಂದು ವಿಕೆಟ್ ಪಡೆದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.