ಮನೆ ರಾಜ್ಯ ಮಡಿಕೇರಿ: ಕಾಡಾನೆ ದಾಳಿಗೆ ಮಹಿಳೆ ಸಾವು

ಮಡಿಕೇರಿ: ಕಾಡಾನೆ ದಾಳಿಗೆ ಮಹಿಳೆ ಸಾವು

0

ಮಡಿಕೇರಿ: ಕಾಡಾನೆ ದಾಳಿ ಮಾಡಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿದ್ದಾಪುರ ಸಮೀಪ ಮಾಲ್ತಾರೆ ಮಟ್ಟಂ ಎಂಬಲ್ಲಿ ಸೋಮವಾರ (ಆ.21) ನಡೆದಿದೆ.

ಐಶಾ(62) ಕಾಡಾನೆ ದಾಳಿಗೆ ಬಲಿಯಾದ ದುರ್ದೈವಿ.

ಇಂದು ಬೆಳಗ್ಗೆ ಮನೆಯ ಸಮೀಪ ವಾಯು ವಿಹಾರ ಮಾಡುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ. ಘಟನೆಯನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದು, ಸ್ಥಳಕ್ಕೆ ಅರಣ್ಯ ಸಚಿವರು ಆಗಮಿಸಬೇಕೆಂದು ಒತ್ತಾಯಿಸಿದ್ದಾರೆ.