ಮಂಡ್ಯ:- ಭ್ರಷ್ಟಾಚಾರ ಹಾಗೂ ಕರ್ತವ್ಯ ಲೋಪದ ಆರೋಪದ ಹಿನ್ನಲೆಯಲ್ಲಿ ನಾಗಮಂಗಲ ತಾಲ್ಲೂಕಿನ ಬಿದರಕೆರೆ ವೃತ್ತದ ಆಡಳಿತ ಅಧಿಕಾರಿ ನಿಂಗಪ್ಪ ಹ ಸುರಪೂರ್ ಅವರನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಆದೇಶಿಸಿದ್ದಾರೆ.
ತಾಲ್ಲೂಕಿನ ಲಾಳನಕೆರೆ ಗ್ರಾಮದ ಲಿಂಗಪ್ಪ ಎಂಬುವರು ತಮ್ಮ ಬಾಬ್ತು ಲಾಳನಕೆರೆ ಗ್ರಾಮದ ಸರ್ವೆ ನಂ.30/1,29,/6,29/19 ಮತ್ತು 29/13 ರ ಜಮೀನನ್ನು ಖಾತೆ ಮಾಡಿಕೊಡಲು ತಮ್ಮಿಂದ ಲಂಚ ವನ್ನು ಪಡೆದುಕೊಂಡು ಖಾತೆ ಮಾಡಿಕೊಟ್ಟಿರುವುದಿಲ್ಲ ಎಂದು ದೂರಿದ್ದರು. ಜಿಲ್ಲಾಧಿಕಾರಿಗಳು ದೂರ ಮನವಿ ಆಲಿಸಿ ಜೂನ್ 27 ರಂದು ಕಚೇರಿ ಸಿಬ್ಬಂದಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ಆದೇಶಿಸಿದ್ದರು.
ಸಮಿತಿಯು ಲಂಚ ಸ್ವೀಕರಿಸಿರುವುದು ಧೃಡ ಎಂದು ವರದಿಯಲ್ಲಿ ತಿಳಿಸಿತ್ತು. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಭ್ರಷ್ಟಾಚಾರ ಹಾಗೂ ಕರ್ತವ್ಯ ಲೋಪದ ಆರೋಪದ ಮೇರೆಗೆ ನಿಂಗಪ್ಪ ಹ ಸುರಪೂರ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.