ಮನೆ ರಾಜ್ಯ ಚಂದ್ರಯಾನ-3 ಯಶಸ್ವಿ; ಜಗತ್ತೇ ನಿಬ್ಬೆರಗಾಗುವಂತೆ ಮಾಡಿದ ಇಸ್ರೋ ವಿಜ್ಞಾನಿಗಳಿಗೆ ಹೆಚ್.ಡಿ.ಕುಮಾರಸ್ವಾಮಿ ಅಭಿನಂದನೆ

ಚಂದ್ರಯಾನ-3 ಯಶಸ್ವಿ; ಜಗತ್ತೇ ನಿಬ್ಬೆರಗಾಗುವಂತೆ ಮಾಡಿದ ಇಸ್ರೋ ವಿಜ್ಞಾನಿಗಳಿಗೆ ಹೆಚ್.ಡಿ.ಕುಮಾರಸ್ವಾಮಿ ಅಭಿನಂದನೆ

0

Join Our Whatsapp Group

ಬೆಂಗಳೂರು: ಚಂದ್ರಯಾನ-3 ಯಶಸ್ವಿಯಾಗಿ ಪೂರೈಸಿ ಭಾರತದ ಬಗ್ಗೆ ಜಗತ್ತೇ ನಿಬ್ಬೆರಗಾಗುವಂತೆ ಮಾಡಿದ ಇಸ್ರೋ ವಿಜ್ಞಾನಿಗಳನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಅಭಿನಂದಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಭಾರತ ವಿಕ್ರಮ ಸಾಧಿಸಿದೆ. ನಮೆಲ್ಲರ ಕನಸು ನನಸಾಗಿದೆ, ನೂರಾ ಇಪ್ಪತ್ತೈದು ಕೋಟಿ ಭಾರತೀಯರ ನಿರೀಕ್ಷೆ ನಿಜವಾಗಿದೆ. ಇಸ್ರೋ ನಮ್ಮ ಹೆಮ್ಮೆ. ಜಗತ್ತಿನಲ್ಲಿಯೇ ಪ್ರಥಮವಾಗಿ ರೋವರ್ (ವಿಕ್ರಮ ಲ್ಯಾಂಡರ್)ಅನ್ನು ಚಂದ್ರನ ದಕ್ಷಿಣ ಧ್ರುವದ ಮೇಲೆ ಯಶಸ್ವಿಯಾಗಿ ಇಳಿಸುವ ಮೂಲಕ ಚಂದ್ರಯಾನ-3 ಮಹಾನ್ ಸಾಹಸವನ್ನು ಇಸ್ರೋ ಪೂರೈಸಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಇಸ್ರೋ ಖಗೋಳ ಸಂಶೋಧನೆಗೆ ನಿರ್ಣಾಯಕ ತಿರುವು ಕೊಟ್ಟಿದೆ. ನಮ್ಮ ವಿಜ್ಞಾನಿಗಳ ಈ ಸಾಧನೆಯನ್ನು ಕೇವಲ ಪದಗಳಿಂದ ಬಣ್ಣಿಸಿದರೆ ಸಾಲದು. ಹಗಲಿರುಳು ಶ್ರಮಿಸಿದ ಅವರ ಯಶಸ್ಸನ್ನು, ಅರ್ಪಣಾ ಮನೋಭಾವವನ್ನು ಹೃದಯಪೂರ್ವಕವಾಗಿ ಕೊಂಡಾಡಿ ಗೌರವಿಸೋಣ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಅಮೆರಿಕ, ರಷ್ಯಾ, ಚೀನಾ ನಂತರ ಚಂದ್ರನ ಮೇಲೆ ರೋವರ್ ಇಳಿಸಿದ ಈ ಸಾಧನೆ ಐತಿಹಾಸಿಕ. ಇಸ್ರೋದ ಈ ಪಯಣ ನನಗೆ ರೋಮಾಂಚನ ಉಂಟು ಮಾಡಿದೆ. ಸಂಸ್ಥೆಯ ಅಧ್ಯಕ್ಷರಾದ ಡಾ.ಸೋಮನಾಥ್ ಸೇರಿದಂತೆ ಅವರ ತಂಡದ ಎಲ್ಲಾ ವಿಜ್ಞಾನಿಗಳು, ತಾಂತ್ರಿಕ ನಿಪುಣರು, ಮತ್ತಿತರರಿಗೆ ನನ್ನ ಅಭಿನಂದನೆಗಳು ಎಂದಿದ್ದಾರೆ ಕುಮಾರಸ್ವಾಮಿಯವರು ತಿಳಿಸಿದ್ದಾರೆ.