ಮನೆ ರಾಜ್ಯ ಸೆಪ್ಟಂಬರ್ 1ರಿಂದ 10ವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಸೆಪ್ಟಂಬರ್ 1ರಿಂದ 10ವರೆಗೆ ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

0

ಬೆಂಗಳೂರು: ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸುವ ಗಡುವು ಮತ್ತೆ ಬದಲಾಗಿದ್ದು, ಸೆಪ್ಟೆಂಬರ್ 1ರಿಂದ ಸೆಪ್ಟೆಂಬರ್ 10ರವರೆಗೆ ತಿದ್ದುಪಡಿಗಾಗಿ ಅರ್ಜಿ ಸಲ್ಲಿಸಬಹುದು.

ಪಡಿತರ ಚೀಟಿಯಲ್ಲಿ ಮಾಹಿತಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನವಾಗಿತ್ತು. ಆದರೆ ಸೋಮವಾರ ಸರ್ವರ್ ದೋಷದಿಂದ ಹಲವರು ತೊಂದರೆ ಅನುಭವಿಸಿದರು. ಸಾರ್ವಜನಿಕರ ಬೇಡಿಕೆಗೆ ಸ್ಪಂದಿಸಿ, ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ಆಗಸ್ಟ್ 23 ರಂದು ಒಂದು ದಿನ ವಿಸ್ತರಣೆ ಮಾಡಲಾಗಿದೆ.

ಇದೀಗ, ಪಡಿತರ ಚೀಟಿ ತಿದ್ದುಪಡಿಗೆ ಹೊಸದಾಗಿ ಅರ್ಜಿಗಳನ್ನು ಸೆಪ್ಟೆಂಬರ್ 1 ರಿಂದ 10 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸ್ವೀಕರಿಸಲಾಗುವುದು ಎಂದು ಆಹಾರ ಇಲಾಖೆ ತಿಳಸಿದೆ.

ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಫಲಾನುಭವಿಗಳು ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ. ಆಗಸ್ಟ್ 23ರಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.

ಸರ್ವರ್ ಸಮಸ್ಯೆ ಇರುವ ಕಾರಣ ಹಂತ ಹಂತವಾಗಿ ಗ್ರಾಹಕರಿಗೆ ಅವಕಾಶ ನೀಡಲಾಗುತ್ತದೆ. ಆನ್ ಲೈನ್ ಅಥವಾ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ವಿಳಾಸ, ಬದಲಾವಣೆ ಮಾಡಲು ಅರ್ಜಿ ಸಲ್ಲಿಸಬಹುದು.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಿದ್ದ ಹಿನ್ನಲೆಯಲ್ಲಿ ಏಪ್ರಿಲ್-ಮೇನಲ್ಲಿ ಎಪಿಎಲ್, ಬಿಪಿಎಲ್ ಕಾರ್ಡ್ ವಿತರಣೆ, ಹೆಸರು ತಿದ್ದುಪಡಿಗೆ ಬ್ರೇಕ್ ಬಿದ್ದಿತ್ತು. ಹೊಸ ಸರ್ಕಾರ ಅಧಿಕಾರಕ್ಕೆ ಬಂದರೂ, ನಾಲ್ಕೂವರೆ ತಿಂಗಳಿನಿಂದ ತಾತ್ಕಾಲಿಕ ಸ್ಥಗಿತಕಾರ್ಯ ಮುಂದುವರೆಸಲಾಗಿತ್ತು. ಈಗ ತಿದ್ದುಪಡಿಗೆ ಮಾತ್ರ ಅವಕಾಶ ನೀಡಿದ್ದು, ಹೊಸ ಕಾರ್ಡ್ ವಿತರಣೆ ಯಾವಾಗ ಎಂದು ಸರ್ಕಾರ ಇನ್ನೂ ತಿಳಿಸಿಲ್ಲ.