ಮನೆ ರಾಜ್ಯ ಕಲಬುರಗಿ: ಚೆನ್ನಾಗಿ ಓದು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಕಲಬುರಗಿ: ಚೆನ್ನಾಗಿ ಓದು ಎಂದು ಬುದ್ದಿವಾದ ಹೇಳಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

0

ಕಲಬುರಗಿ: ಚೆನ್ನಾಗಿ ಓದು ಎಂದು ಬುದ್ಧಿವಾದ ಹೇಳಿದ್ದಕ್ಕೆ ಪಿಯು ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಕೋಡ್ಲಾ ಗ್ರಾಮದಲ್ಲಿ ನಡೆದಿದೆ.

ಕಾವೇರಿ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಕಾವೇರಿ ಸೇಡಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಯು ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು, ಸರಿಯಾಗಿ ಓದು ಎಂದು ಪೋಷಕರು ಬೈಯ್ದಿದ್ದಕ್ಕೆ ಮನನೊಂದು ಕಳೆದ ರಾತ್ರಿ ಮನೆಯಿಂದ ಹೊರಗೆ ಹೋಗಿ ಕೆರೆಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ.

ಈ ಬಗ್ಗೆ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.