ಮನೆ ಕಾನೂನು ಕಾವೇರಿ ವಿವಾದ: ಸೆಪ್ಟಂಬರ್ 1ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಕಾವೇರಿ ವಿವಾದ: ಸೆಪ್ಟಂಬರ್ 1ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

0

ನವದೆಹಲಿ: ಕಾವೇರಿ ನೀರಿಗಾಗಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಇಂದು (ಆಗಸ್ಟ್ 25) ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು, ಮುಂದಿನ ವಿಚಾರಣೆಯನ್ನು ಬರುವ ಶುಕ್ರವಾರಕ್ಕೆ(ಸೆಪ್ಟೆಂಬರ್ 01) ಮುಂದೂಡಿದೆ.

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ತಜ್ಞರಿದ್ದಾರೆ . ನಾವು ತಜ್ಞರಲ್ಲ ಹಾಗಾಗಿ ಯಾವುದನ್ನೂ ತನಿಖೆ ಮಾಡದೆ ತಕ್ಷಣ ಆದೇಶ ಹೊರಡಿಸುವುದು ಕಷ್ಟ ಎಂದು ಅಭಿಪ್ರಾಯ ಪಟ್ಟಿದ್ದು, ಈ ಮಧ್ಯಂತರ ಅವಧಿಯಲ್ಲಿ ಸಭೆ ಕರೆಯುವಂತೆ ಕಾವೇರಿ ನಿರ್ವಹಣಾ ಪ್ರಾಧಿಕಾರಕ್ಕೆ ಸೂಚಿಸಿದೆ.