ಲಡಾಖ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ಖಚಿತ ಈ ಬಗ್ಗೆ ನಾನು ಗ್ಯಾರಂಟಿ ನೀಡುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಲಡಾಖ್ ನಲ್ಲಿ ಕಾರ್ಯಕರ್ತರೊಂದಿಗೆ ಸಂವಾದದಲ್ಲಿ ಮಾತನಾಡಿದ ರಾಹುಲ್ ಗಾಂಧಿ, 2024 ರಲ್ಲಿ ನಾವು ಬಿಜೆಪಿಯನ್ನು ಸೋಲಿಸುತ್ತೇವೆ. ಇದರೊಂದಿಗೆ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ ಮತ್ತು ತೆಲಂಗಾಣ ಚುನಾವಣೆಗಳನ್ನು ಗೆಲ್ಲುತ್ತೇವೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷದಿಂದ ಗೆಲ್ಲುತ್ತೇವೆ ಎಂದರು.
ಬಿಜೆಪಿ ಸಂಸ್ಥೆಗಳನ್ನು ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಿದ ರಾಹುಲ್ ಗಾಂಧಿ, ಒಂದು ವಿಷಯವನ್ನು ಅರ್ಥಮಾಡಿಕೊಳ್ಳಬೇಕು. ಪ್ರಜಾಪ್ರಭುತ್ವದಲ್ಲಿ ಒಂದು ಪಕ್ಷ ಇನ್ನೊಂದು ಪಕ್ಷದ ಜೊತೆ ಜಗಳವಾಡುತ್ತದೆ. ಇಂದು ಭಾರತದಲ್ಲಿ ಹೀಗಾಗುತ್ತಿಲ್ಲ. ಇಂದು ಭಾರತದ ಎಲ್ಲಾ ಸಂಸ್ಥೆಗಳನ್ನು ಬಿಜೆಪಿ ನಿಯಂತ್ರಿಸಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತಿರಲಿಲ್ಲ ಎಂದು ಹೇಳಿದರು.