ಕೋಲಾರ: ಯುವಕನೊಬ್ಬ ತಾಯಿಯ ಸಮಾಧಿ ಪಕ್ಕದಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಶ್ರೀನಿವಾಸಪುರ ತಾಲೂಕಿನ ತಾಡಿಗೊಳ್ ಕ್ರಾಸ್ ನಲ್ಲಿ ಪ್ರವೀಣ್ (22) ಆತ್ಮಹತ್ಯೆ ಮಾಡಿಕೊಂಡ ಯುವಕ.
ಚಾಲಕನಾಗಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಪ್ರವೀಣ್ ತನ್ನ ಊರಿನಲ್ಲಿ ತಾಯಿಯ ಸಮಾಧಿ ಪಕ್ಕದಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಸಂಬಂಧಿಕರ ಮದುವೆಗೆಂದು ಪ್ರವೀಣ್ ಕೆಲವು ದಿನಗಳ ಹಿಂದೆ ಸ್ವಗ್ರಾಮಕ್ಕೆ ಆಗಮಿಸಿದ್ದ ಎಂದು ತಿಳಿದುಬಂದಿದೆ.
ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.














