ಮನೆ ರಾಜ್ಯ ಹಾವೇರಿ: ಗೃಹ ಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 30  ಮಂದಿ ಅಸ್ವಸ್ಥ

ಹಾವೇರಿ: ಗೃಹ ಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 30  ಮಂದಿ ಅಸ್ವಸ್ಥ

0

ಹಾವೇರಿ: ಗೃಹಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿ 30 ಜನ ಅಸ್ವಸ್ಥರಾದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ತಿಮ್ಮೇನಹಳ್ಳಿಯಲ್ಲಿ ನಡೆದಿದೆ.

ನಿನ್ನೆ(ಆ.25) ಬಸವರಾಜ ಶೇಖಪ್ಪ ಎಂಬುವರ ಗೃಹಪ್ರವೇಶ ಕಾರ್ಯಕ್ರಮ ಇತ್ತು. ಈ ಹಿನ್ನಲೆ ಭೋಜನವನ್ನು ವ್ಯವಸ್ಥೆ ಮಾಡಲಾಗಿತ್ತು. ಇಂದು ಬೆಳಿಗ್ಗೆ ಊಟ ಸೇವಿಸಿದ 30 ಕ್ಕೂ ಹೆಚ್ಚು ಜನ ಆಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಕೂಡಲೇ ಅಸ್ವಸ್ಥರನ್ನು ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ಸಿಕ್ಕಿದೆ.

ಈ ಕುರಿತು ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.