ಮೈಸೂರು: ರಾಜ್ಯ ಸರ್ಕಾರ ನೂರು ದಿನ ಪೂರೈಸಿರುವ ಹಿನ್ನೆಲೆಯಲ್ಲಿ ಎಕ್ಸ್ (ಟ್ವೀಟ್ ) ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಸ ಹಂಚಿಕೊಂಡಿದ್ದಾರೆ.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ” 100 ದಿನಗಳು” ಪೂರೈಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಡಿನ ಮತದಾರರು ನಮ್ಮ ಮೇಲೆ ನಂಬಿಕೆ ಮತ್ತು ಭರವಸೆಯನ್ನಿಟ್ಟು 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಪೂರ್ಣ ಬಹುಮತದ ಸುಭದ್ರ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜನರು ನೀಡಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಅವರ ನಿರೀಕ್ಷೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ.
ಗ್ಯಾರಂಟಿ ಮತ್ತು ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಜೊತೆಜೊತೆಗೆ ಬುದ್ಧ, ಬಸವ, ಅಂಬೇಡ್ಕರ್, ಕುವೆಂಪು, ಕನಕದಾಸರು, ನಾರಾಯಣ ಗುರು ಮುಂತಾದ ದಾರ್ಶನಿಕರು ತೋರಿದ ಸಮಾನತೆಯ ಹಾದಿಯಲ್ಲಿ ನಾಡನ್ನು ಮುನ್ನಡಿಸಿಕೊಂಡು ಹೋಗುತ್ತಿದ್ದೇವೆ. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸರ್ಕಾರದ ಕಾರ್ಯಕ್ರಮಗಳ ಮೂಲಕ ತಲುಪಬೇಕೆಂಬ ಆಶಯದೊಂದಿಗೆ ಆರಂಭಿಸಿರುವ ನಮ್ಮ ಪಯಣಕ್ಕಿಂದು ಶತಕ ಸಂಭ್ರಮ. ಈ ವಿಶೇಷ ಸಂದರ್ಭದಲ್ಲಿ ನಮ್ಮೊಂದಿಗೆ ಕೈಜೋಡಿಸಿ, ಬೆಂಬಲವಾಗಿ ನಿಂತಿರುವ ನಾಡಿನ ಪ್ರತಿಯೊಬ್ಬರಿಗೂ ಧನ್ಯವಾದಗಳು. ನಿಮ್ಮೆಲ್ಲರ ಸಹಕಾರ ನಿರಂತರವಾಗಿರಲಿ ಎಂದು ಟ್ವೀಟ್ ಮಾಡಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.