ಹುಬ್ಬಳ್ಳಿ: ಹುಬ್ಬಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಭೆ ಮಾಡಿದ್ದವರಲ್ಲಿ ಮತ್ತೆ 15 ಜನರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ. ಒಟ್ಟು 12 ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿದೆ.
ದೇವಸ್ಥಾನ, ಮನೆ, ಆಸ್ಪತ್ರೆ ಹಾಗೂ ಪೋಸ್ಟ್ ಆಫೀಸ್ ಮೇಲೆ ಕಲ್ಲು ಎಸೆದಿರುವ ಪ್ರಕರಣ ಹಾಗೂ ಸರ್ಕಾರಿ ಹಾಗೂ ಖಾಸಗಿ ಆಸ್ತಿಪಾಸ್ತಿ ಹಾನಿ ಕೇಸ್ಗಳು ದಾಖಲಾಗಿವೆ.
ಹುಬ್ಬಳ್ಳಿ ಗಲಭೆ ಪ್ರಕರಣ ಬಂಧಿತರ ಸಂಖ್ಯೆ 104ಕ್ಕೆ ಏರಿಕೆಸೂಕ್ತ ಬಂದೋಬಸ್ತ್: ಬೇರೆ ಕಡೆ ಎಲ್ಲೂ ಗಲಾಟೆ ಆಗದಂತೆ ಸೂಕ್ತ ಕ್ರಮಕೈಗೊಳ್ಳಲಾಗಿದೆ. ಪ್ರಕರಣದ ಬಗ್ಗೆ ಪೊಲೀಸ್ ತನಿಖೆ ಆರಂಭವಾಗಿದೆ. ತನಿಖೆ ನಂತರ ಯಾರೆಲ್ಲಾ ಈ ವೇಳೆ ಭಾಗಿಯಾಗಿದ್ದರು ಎಂಬುದರ ಬಗ್ಗೆ ಗೊತ್ತಾಗಲಿದೆ.
ಹುಬ್ಬಳ್ಳಿ ಗಲಭೆ ಪ್ರಕರಣದ ಕುರಿತು ಗುಪ್ತಚರ ಮಾಹಿತಿಯಿಂದ ಪೊಲೀಸ್ ಇಲಾಖೆ ಅಲರ್ಟ್ ಆಗಿದೆ. ಬಂಧಿತರ ಬಿಡುಗಡೆಗೆ ಆಗ್ರಹಿಸಿ ಮತ್ತೊಂದು ಹೋರಾಟಕ್ಕೆ ಕೆಲವು ಸಂಘಟನೆಗಳು ಮುಂದಾಗಿರುವ ಮಾಹಿತಿ ಇದೆ. ಹೀಗಾಗಿ ಏಕಾಏಕಿ ಆರೋಪಿಗಳನ್ನು ಮತ್ತೊಂದು ಸ್ಥಳಕ್ಕೆ ಶಿಫ್ಟ್ ಮಾಡಲಾಗಿದೆ.
ಬಂಧಿತ ಗಲಭೆಕೋರರನ್ನು ಕಲಬುರಗಿಯ ಕೇಂದ್ರಿಯ ಕಾರಾಗೃಹಕ್ಕೆ ರವಾನೆ ಮಾಡಲಾಗಿದೆ. ಹುಬ್ಬಳ್ಳಿಯಿಂದ ನವಲಗುಂದ ಮಾರ್ಗವಾಗಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಆರೋಪಿಗಳನ್ನು ಬೇರೆಕಡೆ ರವಾನಿಸಲಾಯಿತು.
ಸುಮಾರು 88 ಜನರನ್ನು ಜೈಲಿಗೆ ಕಳುಹಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಿಂದ ಆರೋಪಿಗಳನ್ನ ಸ್ಥಳಾಂತರಿಸಲಾಗಿದ್ದು, ಬಂಧಿತರೆಲ್ಲರಿಗೂ ಹುಬ್ಬಳ್ಳಿಯ 4ನೇ ಜೆಎಮ್ಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ಆದೇಶ ನೀಡಿದೆ. ಇಂದು ಪೊಲೀಸರು ಮತ್ತೆ 14 ಆರೋಪಿಗಳನ್ನು ಕೋರ್ಟ್‌ಗೆ ಹಾಜರು ಪಡಿಸಲಿದ್ದಾರೆ.