ಮನೆ ರಾಜ್ಯ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೂ ಪ್ರತಿ ತಿಂಗಳು ಎರಡು ಸಾವಿರ ರೂ ಸಿಗಲಿದೆ: ಲಕ್ಷ್ಮೀ ಹೆಬ್ಬಾಳ್ಕರ್

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೂ ಪ್ರತಿ ತಿಂಗಳು ಎರಡು ಸಾವಿರ ರೂ ಸಿಗಲಿದೆ: ಲಕ್ಷ್ಮೀ ಹೆಬ್ಬಾಳ್ಕರ್

0

ಚಾಮರಾಜನಗರ: ರಾಜ್ಯ ಸರ್ಕಾರದ ಪಂಚ್ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಡಿ ಅಂಗನವಾಡಿ ಹಾಗು ಆಶಾ ಕಾರ್ಯಕರ್ತೆಯರಿಗೂ ಪ್ರತಿ ತಿಂಗಳು ಎರಡು ಸಾವಿರ ರೂ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಚಾಮರಾಜನಗರದಲ್ಲಿ ಗೃಹಲಕ್ಷ್ಮೀ ಯೋಜನೆ ಪೂರ್ವ ಸಿದ್ದತಾ ಸಭೆಯಲ್ಲಿ ಅವರು ಈ ಘೋಷಣೆ ಮಾಡಿದರು.

ಎ ಟ್ರೇಲರ್ ಹೈ.. ಪಿಕ್ಚರ್ ಅಭಿ ಬಾಕಿ ಹೈ ಎಂದು ಗೃಹಲಕ್ಷ್ಮೀ ಯೋಜನೆ ಜಾರಿ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ನಮ್ಮ ಸರ್ಕಾರಕ್ಕೆ ನೂರು ದಿನ ಆಗಿದೆ. ಇನ್ನು ಮೇಲೆ ನಮ್ಮ ಇಲಾಖೆಯ ಕೆಲಸ ಕಾರ್ಯಗಳು ಶುರುವಾಗುತ್ತವೆ. ಸನ್ಮಾನ ಸ್ವೀಕರಿಸುವ ಕೆಲಸ 30ನೇ ತಾರೀಖಿನ ನಂತರ ಶುರು ಮಾಡುತ್ತೇನೆ ಎಂದರು.

ಆ. ೩೦ ರಂದು ಮೈಸೂರಿನಲ್ಲಿ ದೊಡ್ಡ ಮಟ್ಟದ ಕಾರ್ಯಕ್ರಮ ಮಾಡುತ್ತಿದ್ದೇವೆ. ಕಾರ್ಯಕ್ರಮಕ್ಕೆ ಒಂದೂವರೆ ಲಕ್ಷ ಜನ ಸೇರುವ ಸಾಧ್ಯತೆ ಇದೆ. ರಾಜ್ಯದ ಎಲ್ಲ ಮಹಿಳೆಯರು ಅತ್ಯುತ್ಸಾಹದಿಂದ ಯೋಜನೆಯಲ್ಲಿ ಪಾಲ್ಗೊಂಡಿದ್ದಾರೆ. ರಾಜ್ಯಾದ್ಯಂತ ೧.೧೧ ಕೋಟಿ ಜನರಿಂದ ಗೃಹ ಲಕ್ಷ್ಮಿಗೆ ಅರ್ಜಿ ನೋಂದಣಿ ಆಗಿವೆ. ಅರ್ಜಿ ಸಲ್ಲಿಸಲು ಟೈಮ್ ಲಿಮಿಟ್ ಇಲ್ಲ. ಮುಂದಿನ ಬಾರಿಯೂ ನಮ್ಮ ಸರ್ಕಾರ ಬಂದರೆ ಯೋಜನೆ ಮುಂದುವರಿಯಲಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದರು.

ಇದೇ ವೇಳೆ, ಆಪರೇಷನ್ ಹಸ್ತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸುತ್ತ ‘ಯಾರ್ಯಾರಿಗೆ ನಮ್ಮ ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತದ ಮೇಲೆ ನಂಬಿಕೆ, ವಿಶ್ವಾಸ ಇದೆಯೋ ಅಂತವರು ಬರ್ತಾರೆ. ಜನಪರ ಕಾರ್ಯಕ್ರಮ ನೀಡುತ್ತಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ನಾಯಕತ್ವದ ಮೇಲೆ ನಂಬಿಕೆ ಇಟ್ಟು ಪಕ್ಷ ಸೇರುತ್ತಿದ್ದಾರೆ. ಯಾವುದೇ ಷರತ್ತು ಇಲ್ಲದೆ ಸೇರುತ್ತಿದ್ದಾರೆ’ ಎಂದರು.