ಮನೆ ರಾಜ್ಯ ಮಂಡ್ಯ: ಈಜಲು ಹೋಗಿ ನೀರಿನಲ್ಲಿ ಮುಳುಗಿ ಯುವಕ ಸಾವು

ಮಂಡ್ಯ: ಈಜಲು ಹೋಗಿ ನೀರಿನಲ್ಲಿ ಮುಳುಗಿ ಯುವಕ ಸಾವು

0

ಮಂಡ್ಯ: ಈಜಲು ಹೋಗಿ ನೀರಿನಲ್ಲಿ ಮುಳುಗಿ ಯುವಕ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಹಲಗೂರಿನ ಗಾಣಾಳು ಪಾಲ್ಸ್ ನಲ್ಲಿ ನಡೆದಿದೆ.

ಮನುಕುಮಾರ್(27)ಮೃತ ಯುವಕ.

ಮಂಡ್ಯ ತಾಲ್ಲೂಕಿನ ಸಬ್ಬನಹಳ್ಳಿ ಗ್ರಾಮದವನಾದ ಮನುಕುಮಾರ್ ಖಾಸಗಿ ಬಸ್ ನ ಡ್ರೈವರ್ ಆಗಿ ಕೆಲಸ ಮಾಡ್ತಿದ್ದ. ಸ್ನೇಹಿತರೊಂದಿಗೆ ಪಾಲ್ಸ್ ನೋಡಲು ಹೋಗಿದ್ದ ವೇಳೆ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಕಳೆದೆರಡೂ ದಿನಗಳಿಂದ ಮೃತ ಯುವಕನ ಶವಕ್ಕಾಗಿ ಹುಡುಕಾಟ ನಡೆಸಲಾಗಿತ್ತು. ಇಂದು ಮೃತ ಯುವಕನ ಶವ ನೀರಿನಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಯವರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮರಣೋತ್ತರ ಪರೀಕ್ಷೆಗಾಗಿ ಮಳವಳ್ಳಿ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ಮೃತ ದೇಹವನ್ನು ರವಾನಿಸಲಾಗಿದೆ.

ಹಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.