ಮನೆ ರಾಜ್ಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಶವ ಪತ್ತೆ

ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಶವ ಪತ್ತೆ

0

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು  ರೇಂಜ್‌ ನ ಬೆಳ್ಳಾಜೆ ಬೀಟ್‌ ನ ಅತ್ತಿಕಾನೆ ಕಾಫಿ ಎಸ್ಟೇಟ್‌ ನಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದೆ.

ಮೃತ ಹುಲಿ ದೇಹದ ಎಲ್ಲಾ ಭಾಗಗಳು ಹಾಗೇ ಇದ್ದು,  ಮೃತದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿಲ್ಲ.

ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯ ಸಂಸ್ಕಾರ ನೆರವೇರಿಸಿದರು.