ಮನೆ ರಾಜ್ಯ ದಾವಣಗೆರೆ: ದನಗಳ ಮೈತೊಳೆಯಲು ಹೋಗಿದ್ದ ಯುವಕ ನೀರು ಪಾಲು

ದಾವಣಗೆರೆ: ದನಗಳ ಮೈತೊಳೆಯಲು ಹೋಗಿದ್ದ ಯುವಕ ನೀರು ಪಾಲು

0

ದಾವಣಗೆರೆ: ದನಗಳ ಮೈ ತೊಳೆಯಲು ಚಾನಲ್ ಗೆ ಹೋಗಿದ್ದ ಯುವಕನೋರ್ವ ಕಾಲು ಜಾರಿ ನೀರಿಗೆ ಬಿದ್ದು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದ ಬಳಿ ನಡೆದಿದೆ.

ಮಂಜುನಾಥ್(26) ಮೃತ ವ್ಯಕ್ತಿ.

ಚಾನಲ್​ ನಲ್ಲಿ ದನಗಳ ಮೈ ತೊಳೆಯಲು ಹೋಗಿದ್ದರು. ಈ ವೇಳೆ ಕಾಲು ಜಾರಿ ನೀರಿನಲ್ಲಿ ಬಿದ್ದು, ಕೊನೆಯುಸಿರೆಳೆದಿದ್ದಾನೆ. ಇನ್ನು ಮುಂಜುನಾಥ್​ ಮೃತದೇಹ ಕೊಚ್ಚಿ ಹೋಗುತ್ತಿದ್ದನ್ನು ಗಮನಿಸಿದ ಸ್ಥಳೀಯರು ಕೂಡಲೇ ನೀರಿಗೆ ಹಾರಿ ಹೊರ ತೆಗೆದು, ಹೊನ್ನಾಳಿ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

ಈ ಕುರಿತು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.